ಮಡಿಕೇರಿ, ಮೇ ೧೯: ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ೨೦೨೫-೨೬ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ ೧೦೦ ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳಿಗೆ ಸಾಧನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಬಳಗದ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೨೨ ರಂದು ಬೆಳಿಗ್ಗೆ ೧೦.೩೦ಕ್ಕೆ ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ ೧೦೦ ಫಲಿತಾಂಶ ಪಡೆದ ಜಿಲ್ಲೆಯ ೧೦೦ಕ್ಕೂ ಹೆಚ್ಚು ಶಾಲೆಯ ಪ್ರನಿಧಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಇದರೊಂದಿಗೆ ಒಟ್ಟು ೨ ಸಾವಿರ ಪುಸ್ತಕವನ್ನು ಎಲ್ಲಾ ಶಾಲೆಗಳಿಗೆ ಹಂಚಿಕೆ ಮಾಡಲಾಗುವುದು ಎಂದ ಅವರು, ಸಾಹಿತ್ಯ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚು ಸರಕಾರಿ ಶಾಲೆಗಳು ಸಾಧನೆ ತೋರಿರುವುದು ಗಮನಾರ್ಹ ಸಂಗತಿ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಲಿದ್ದಾರೆ. ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಪೆರಿಗ್ರಿನ್ ಎಸ್. ಮಚಾಡೋ ಅಭಿನಂದನಾ ನುಡಿಗಳನ್ನಾಡಲಿದ್ದು, ಕುಶಾಲನಗರ ರೋಟರಿ ಸಹಾಯಕ ಗವರ್ನರ್ ಎಂ.ಡಿ. ರಂಗಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜು, ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಡಯಟ್ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಪಿ.ಮಹೇಶ್, ಎಂ. ಕೃಷ್ಣಪ್ಪ, ಟಿ.ಜೆ. ಆನಂದ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಣ ಹೆಚ್.ಜಿ. ಕುಮಾರ್, ಮಡಿಕೇರಿ ತಾಲೂಕು ಅಧ್ಯಕ್ಷ ಪಿ.ಎಸ್. ರವಿಕೃಷ್ಣ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಟಿ.ಆರ್. ರತ್ನಕುಮಾರ್, ವೀರಾಜಪೇಟೆ ತಾಲೂಕು ಅಧ್ಯಕ್ಷೆ ಡಿ. ಚಂದನ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮಡಿಕೇರಿ ತಾಲೂಕು ಕ.ಸಾ.ಪ. ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಷ್, ಕೊಡವ ತಕ್ಕ್ ಎಳ್ತ್ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಸೋಮವಾರಪೇಟೆ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಜವರಪ್ಪ, ಹಿರಿಯ ಸಾಹಿತಿಗಳಾದ ಕಿಗ್ಗಾಲು ಗಿರೀಶ್, ವೈಲೇಶ್, ಮೊಣ್ಣಂಡ ಶೋಭಾ ಸುಬ್ಬಯ್ಯ ಪಾಲ್ಗೊಳ್ಳಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಬಳಗದ ಪ್ರಮುಖರಾದ ಕೆ.ಎಸ್. ರಮೇಶ್, ನಾಗರಾಜಶೆಟ್ಟಿ, ಧನಂಜಯ್ ಹಾಜರಿದ್ದರು.