ಮಡಿಕೇರಿ, ಮೇ.೧೯: ೬೬/೧೧ಕೆ.ವಿ ವಿದ್ಯುತ್ ಉಪಕೇಂದ್ರದಿAದ ಹೊರಹೊಮ್ಮುವ ಎಫ್-೬ ಭಾಗಮಂಡಲ ಫೀಡರ್‌ನಲ್ಲಿ ತಾ.೨೦ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಮಳೆಗಾಲದ ಮುಂಜಾಗ್ರತಾ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ತಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ೬೬/೧೧ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿAದ ಹೊರಹೊಮ್ಮುವ ಎಫ್-೩ ಗದ್ದಿಗೆ ಹಾಗೂ ಎಫ್-೧೧ ಗಾಳಿಬೀಡು ಫೀಡರ್‌ನಲ್ಲಿ ತಾ.೨೦ ರಂದು(ಇAದು) ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್, ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್‌ನ್ಯಾಷನಲ್, ಐ.ಟಿಐ ಹಿಂಭಾಗ, ಕಾವೇರಿ ಬಡಾವಣೆ, ಟಿಜಾನ್ ಬಡಾವಣೆ, ಅಬ್ದುಲ್ ಕಲಾಂ ಬಡಾವಣೆ, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತಿç, ಕುಡಿಯುವ ನೀರು, ಕೂಟುಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.