ಚೆಯ್ಯಂಡಾಣೆ, ಮೇ ೧೯: ಮಡಿಕೇರಿ ತಾಲೂಕು ೧೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕಡಂಗ ಅರಪಟ್ಟು ಸರ್ಕಾರಿ ಪ್ರಾಥಮಿಕ ಶಾಲೆಯ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಸಮ್ಮೇಳನಾಧ್ಯಕ್ಷ ಐತಿಚಂಡ ರಮೇಶ್ ಉತ್ತಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಲಿದೆ. ಶಾಸಕ ಎ.ಎಸ್.ಪೊನ್ನಣ್ಣ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಶಾಸಕ ಡಾ. ಮಂತರ್ ಗೌಡ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಸಿ.ಎ. ಮೊಹಮ್ಮದ್ ನಿಝಾರ್ ಸಖಾಫಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ ಅಪ್ಪಚ್ಚು ರಂಜನ್, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವಕಾಮತ್, ಕಸಾಪ ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಕಡಂಗ ವಿಜಯ ಪ್ರೌಢಶಾಲೆಯ ಸಮೀಪದಿಂದ ಮುಖ್ಯ ರಸ್ತೆಗಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಸಭಾಂಗಣದವರೆಗೆ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾತಂಡಗಳು ಪಾಲ್ಗೊಳ್ಳಲಿವೆ. ಬೆಳಿಗ್ಗೆ ೮ ಗಂಟೆಗೆ ದಿ.ಪಾಂಡAಡ ಕುಟ್ಟಣಿ ಸಭಾ ಮಂಟಪದ ಮುಂಭಾಗ ಕಸಾಪ ಸ್ವಾಗತ ಸಮಿತಿಯ ಉಪಾಧ್ಯಕ್ಷ ಹಾಗೂ ಹಣಕಾಸು ಸಮಿತಿ ಅಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ರಾಷ್ಟçಧ್ವಜಾರೋಹಣ ನೆರವೇರಿಸಲಿದ್ದಾರೆ ಕಸಾಪ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಕಸಾಪ ಧ್ವಜಾರೋಹಣ ಮಾಡಲಿದ್ದಾರೆ. ಮುಖ್ಯ ರಸ್ತೆಯಲ್ಲಿ ನೆನಪಿನ ದ್ವಾರಗಳನ್ನು ನಿರ್ಮಿಸಲಾಗಿದ್ದು ಬೆಳಿಗ್ಗೆ ೯ ಗಂಟೆಗೆ ಉದ್ಘಾಟಿಸಲಾಗುವುದು. ಕನ್ನಡ ಗೀತಾ ಗಾಯನ, ವಿಚಾರಗೋಷ್ಠಿ, ಕವಿಗೋಷ್ಠಿ, ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ ಸಮಾರೋಪ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.