ನಾಪೋಕ್ಲು, ಮೇ ೧೯: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕ ಹಾಗೂ ವೀರಾಜಪೇಟೆ ತಾಲೂಕು ಘಟಕದ ವತಿಯಿಂದ ನಡೆದ ತಾಲೂಕು ಮಟ್ಟದ ಕವನ ವಾಚನ ಸ್ಪರ್ಧೆಯಲ್ಲಿ ವೀರಾಜಪೇಟೆ ಪ್ರಗತಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಚಾಮೇರ ನಕ್ಷ ದೇಚಮ್ಮ ಪ್ರಥಮ, ಗೋಣಿಕೊಪ್ಪ ಲಯನ್ಸ್ ಶಾಲೆಯ ಪ್ರಜ್ಞ ಪೂವಮ್ಮ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅಂತರ್ಜಾಲದ ಮೂಲಕ ನಡೆದ ಕವನ ವಾಚನ ಸ್ಪರ್ಧೆಯಲ್ಲಿ ತಾಲೂಕಿನ ಹಲವು ವಿದ್ಯಾರ್ಥಿಗಳು ಭಾಗವಹಿಸಿ, ಸ್ವರಚಿತ ಹಾಗೂ ಇತರ ಕವಿಗಳ ಸಾಹಿತ್ಯವನ್ನು ವಾಚಿಸಿದರು.

ವಿಜೇತರಿಗೆ ಬಹುಮಾನ ಮತ್ತು ಪ್ರಸಂಶನಾ ಪತ್ರವನ್ನು ಶಾಲೆಗಳು ಪ್ರಾರಂಭವಾದ ನಂತರ ವಿತರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವೀರಾಜಪೇಟೆ ತಾಲೂಕು ಅಧ್ಯಕ್ಷೆ ಮುಕ್ಕಾಟಿರ ಕಾವೇರಮ್ಮ ಕರುಂಬಯ್ಯ ತಿಳಿಸಿದ್ದಾರೆ.