ಶನಿವಾರಸAತೆ, ಮೇ ೧೯: ಪಟ್ಟಣದ ತ್ಯಾಗರಾಜ ಕಾಲೋನಿಯ ಶ್ರೀಚಾಮುಂಡೇಶ್ವರಿ ದೇವಿ-ಗುಳಿಗ ದೈವದ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಿ-ದೈವಕ್ಕೆ ಹೂವಿನ ಅಲಂಕಾರ ಮಾಡಿ, ಎಳನೀರು, ಹಣ್ಣುಕಾಯಿ, ನೈವೇದ್ಯ ಸಮರ್ಪಿಸಲಾಯಿತು.ಮುತ್ತೈದೆಯರು ನಿಂಬೆಹಣ್ಣಿನ ಆರತಿ ಬೆಳಗಿ, ಮಹಾಮಂಗಳಾರತಿಯಾಗಿ, ತೀರ್ಥ-ಪ್ರಸಾದ ವಿನಿಯೋಗವಾಯಿತು.

ಅರ್ಚಕರಾದ ಪ್ರಕಾಶ್ಚಂದ್ರ ಸುವರ್ಣ ಪೂಜಾ ವಿಧಿ-ವಿಧಾನ ನೆರವೇರಿಸಿದರು.