ಮಡಿಕೇರಿ, ಮೇ ೨೦: ಮುಂಗಾರು ಆರಂಭ ಹಿನ್ನೆಲೆ ವೀರಾಜಪೇಟೆ ತಾಲೂಕಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಟಾಸ್ಕ್ಫೋರ್ಸ್ ಸಮಿತಿ ಹಾಗೂ ಗ್ಯಾರಂಟಿ ಸಮಿತಿ ಸಭೆಯು ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಪ್ರಶಾಂತ್ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾನ್ಸೂನ್ ಪ್ರಾರಂಭವಾಗುತ್ತಿದು,್ದ ತಾಲೂಕಿನ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲು ಪೊನ್ನಂಪೇಟೆ ಹಾಗೂ ವೀರಾಜಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಯಿತು.

ಮಳೆಗಾಲ ಸಂದರ್ಭದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ, ಆ ದಿಸೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಪ್ರಶಾಂತ್ ಸಲಹೆ ನೀಡಿದರು.

ಸೆಸ್ಕ್ ಇಲಾಖೆಯವರು ಮುಂಜಾಗ್ರತಾ ಕ್ರಮ ವಹಿಸಿ, ಹೆಚ್ಚಾಗಿ ಮಳೆ ಬೀಳುವ ಗ್ರಾ.ಪಂ.ಗಳಲ್ಲಿ ಸೆಸ್ಕ್ ಇಲಾಖೆಯಿಂದ ಜಂಗಲ್ ಕಟ್ಟಿಂಗ್ ಮಾಡಿಸಬೇಕು ಹಾಗೂ ಅಂಗನವಾಡಿ ಮತ್ತು ಶಾಲೆಗಳ ಸುತ್ತಮುತ್ತ ಇರುವಂತಹ ಅಪಾಯಕಾರಿ ಮರಗಳನ್ನು ತೆರೆವುಗೊಳಿಸಿ ಯಾವುದೇ ಮಕ್ಕಳಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮವಹಿಸಬೇಕು ಎಂದು ವೀರಾಜಪೇಟೆ ತಾ.ಪಂ. ಇ.ಒ. ರಾಜೇಶ್ ಕೆ.ಆರ್. ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚರಂಡಿಗಳ ಸ್ವಚ್ಛತೆ ಕಾಪಾಡುವ ಮೂಲಕ ಮಳೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ರೀತಿಯಲ್ಲಿ ನೋಡಿಕೊಳ್ಳಲು ಸಭೆಯಲ್ಲಿ ಚರ್ಚಿಸಲಾಯಿತು.

ಗೃಹಜ್ಯೋತಿ ತಾಲೂಕಿನಲ್ಲಿ ಶೇ. ೯೯ ಪ್ರಗತಿಯಾಗಿದೆ. ಮಳೆಗಾಲಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಸೆಸ್ಕ್ ಇಲಾಖೆಯಿಂದ ಮಾಡಿಕೊಂಡಿದ್ದು, ಸಾರ್ವಜನಿಕರಿಗೆ ತೊಂದರೆ ಯಾಗದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಸೆಸ್ಕ್ ಅಧಿಕಾರಿಗಳು ಸಭೆಗೆ ತಿಳಿಸಿದರು. ತಾಲೂಕಿನ ವಿವಿಧ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಸಮಸ್ಯೆಗಳು ಇದ್ದು, ಈ ಕುರಿತು ಕ್ರಮವಹಿಸಲು ತಿಳಿಸಲಾಯಿತು.

ಗೃಹಲಕ್ಷ್ಮಿ ಯೋಜನೆಯಡಿ ತಾಲೂಕಿನಲ್ಲಿ ಶೇ. ೯೮ ಪ್ರಗತಿಯಾಗಿದು,್ದ ಫೆಬ್ರವರಿ ತಿಂಗಳವರೆಗೆ ಹಣ ಪಾವತಿಯಾಗಿದೆ. ಮಾರ್ಚ್ ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಸಂಬAಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ತಾಲೂಕಿನ ವ್ಯಾಪ್ತಿಯಲ್ಲಿ ಮೃತಪಟ್ಟವರಿಗೂ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಶಕ್ತಿ ಯೋಜನೆ, ಯುವನಿಧಿ, ಅನ್ನಭಾಗ್ಯ ಯೋಜನೆಗಳ ಕುರಿತು ಚರ್ಚಿಸಲಾಯಿತು. ಪೊನ್ನಂಪೇಟೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು, ಸಹಾಯಕ ಕಾರ್ಯಪಾಲಕ ಅಭಿಯಂತರರು (ಗ್ರಾ.ಕು) ಭಾಸ್ಕರ್, ಸಹಾಯಕ ನಿರ್ದೇಶಕ (ಗ್ರಾ.ಉ) ಶ್ರೀನಿವಾಸ್ ಎಂ.ಡಿ, ಸಹಾಯಕ ಲೆಕ್ಕಾಧಿಕಾರಿಗಳಾದ ಗಣೇಶ್ ಕುಮಾರ್, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಪೊನ್ನಂಪೇಟೆ ಹಾಗೂ ವೀರಾಜಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.