ಕುಶಾಲನಗರ, ಮೇ ೨೦ : ಕುಶಾಲನಗರ ತಾಲೂಕಿನ ೫೪ ಫಲಾನುಭವಿಗಳಿಗೆ ೯೪ ಸಿ ಮತ್ತು ೯೪ ಸಿಸಿ ಅಡಿಯಲ್ಲಿ ಹಕ್ಕುಪತ್ರ ವಿತರಣೆ ನಡೆಯಿತು. ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸರಳ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು. ತಾಲೂಕಿನ ಗುಮ್ಮನಕೊಲ್ಲಿ, ಕೂಡುಮಂಗಳೂರು, ಕೂಡ್ಲೂರು, ಗೊಂದಿಬಸವನಹಳ್ಳಿ, ತೊರೆನೂರು ಶಿರಂಗಾಲ, ಹುಲಸೆ ಹೆಬ್ಬಾಲೆ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.

ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ನಟೇಶ್ ಗೌಡ, ಗೋವಿಂದಪ್ಪ, ಸಂಜೀವ ಮತ್ತು ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಇದ್ದರು.