ಚೆಯ್ಯಂಡಾಣೆ, ಮೇ೨೦: ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಆಸಕ್ತಿ ನೀಡಿ ಎಂದು ವಿಧಾನ ಸಭಾ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮಡಿಕೇರಿ ತಾಲೂಕು ೧೨ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯಕ್ಕೆ ಕೊಡಗಿನ ಜನ ಹೆಚ್ಚಿನ ಕೊಡುಗೆ ಕೊಟ್ಟಿದ್ದಾರೆ, ಅದಕ್ಕೆ ಇಲ್ಲಿ ನಡೆಯುತ್ತಿರುವ ಸಮ್ಮೇಳನ ಸಾಕ್ಷಿ, ಕನ್ನಡವನ್ನು ಬೆಳೆÀಸೋಣ ಕನ್ನಡವನ್ನು ಉಳಿಸಲು ಎಲ್ಲರೂ ಪಣ ತೊಡೋಣ, ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಇರಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಆದರೆ ವಾಸ್ತವ ಪರಿಸ್ಥಿತಿ ಹೇಗಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.

ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಹ ಸ್ಥಳೀಯ ಹಾಗೂ ನಾಡಿನ ಭಾಷೆಗಳು ಬಲಯುತವಾಗಿದೆ. ಆದರೆ ನಗರ, ಮಹಾನಗರ ಪ್ರದೇಶಗಳಲ್ಲಿ ಪರಿಸ್ಥಿತಿ ಯಾವ ರೀತಿ ಇದೆ ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ. ಕನ್ನಡ ಭಾಷೆ ಬಗ್ಗೆ ತಾತ್ಸಾರ ಇರಬಾರದು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಚಿಂತಿಸಬೇಕಿದೆ ಎಂದರು.

ಎಲ್ಲರಲ್ಲೂ ಸ್ವಾಭಿಮಾನ ಬಿತ್ತಬೇಕು. ಕನ್ನಡ, ಕೊಡವ, ಅರೆಭಾಷೆ ಜನರ ಭಾಷೆಯಾಗಿ ಉಳಿಯಬೇಕು. ರಾಜ್ಯದಲ್ಲಿ ಇತರ ಭಾಷೆಗಳನ್ನು ಸಮಾನವಾಗಿ ಕಾಣುತ್ತೇವೆ. ಆದರೆ ಹತ್ತಿರದ ರಾಜ್ಯಗಳಿಗೆ ತೆರಳಿದಾಗ ಪರಿಸ್ಥಿತಿ ಬೇರೆ ಇದೆ ಎಂಬುದನ್ನು ಮನಗಾಣಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ; ಕನ್ನಡ ಭಾಷೆ, ನಾಡು-ನುಡಿ, ವಿಚಾರಧಾರೆಗಳು ಎಲ್ಲೆಡೆ ತಲುಪಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಸಹಕಾರಿ ಆಗಿದೆ. ಪುಸ್ತಕ ಬಿಡುಗಡೆ, ಸ್ಮರಣ ಸಂಚಿಕೆ ಹೊರತರುವುದು, ಕವಿಗೋಷ್ಠಿ, ವಿಚಾರಗೋಷ್ಠಿ, ಕೃಷಿ, ಸಾಹಿತ್ಯ ಹೀಗೆ ಪ್ರತಿಯೊಂದು ಬಗ್ಗೆಯೂ ಸಾಹಿತ್ಯ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕನ್ನಡದ ಜೊತೆಗೆ ಕೊಡವ, ಅರೆಭಾಷೆ ಸೇರಿದಂತೆ ಹಲವು ಭಾಷೆಗಳ ಬೆಳವಣಿಗೆಗೆ ಇಲ್ಲಿನ ಸ್ಥಳೀಯರು ಶ್ರಮಿಸಿದ್ದಾರೆ. ಅವರನ್ನು ಸದಾ ಸ್ಮರಿಸಬೇಕಿದ್ದು, ಆ ನಿಟ್ಟಿನಲ್ಲಿ ಯುವಜನರಿಗೆ ಪರಿಚಯಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ, ನಡಿಕೇರಿಯಂಡ ಚಿಣ್ಣಪ್ಪ, ಸೇರಿದಂತೆ ಹಲವರು ಕನ್ನಡ ಮತ್ತು ಕೊಡವ ಭಾಷೆ ಬೆಳವಣಿಗೆಗೆ ಶ್ರಮಿಸಿದ್ದು, ಸ್ಥಳೀಯ ಭಾಷೆ ಜೊತೆಗೆ ನಾಡು ನುಡಿ ಭಾಷೆ ಬೆಳೆಸಬೇಕು ಎಂದರು.೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ; ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನವಿದೆ. ಅದನ್ನು ಉಳಿಸಿಕೊಂಡು ಹೋಗಬೇಕು. ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು. ಕನ್ನಡ ಭಾಷೆಗೆ ಮತ್ತಷ್ಟು ಉತ್ತೇಜನ ನೀಡಬೇಕು ಎಂದರು.

ತಾ.ಪಂ.ಇಒ ಶೇಖರ್ ಅವರು ಸಿ.ನಿಝಾರ್ ಸಖಾಫಿ ಬರೆದಿರುವ ಕಡಂಗ ನೆನಪಿನಂಗಳದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತನವನ್ನು ಉಳಿಸಿಕೊಂಡು ಬೆಳೆಯಬೇಕು. ಮನೆಯಿಂದಲೇ ಕನ್ನಡ ಭಾಷೆ ಉಳಿಯಬೇಕು ಎಂದರು.

ನಿಕಟಪೂರ್ವ ಸಮ್ಮೇಳನ ಅಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬAಡ ಮಾತನಾಡಿದರು. ಕಸಾಪ ನಾಪೋಕ್ಲು ಹೋಬಳಿ ಅಧ್ಯಕ್ಷ ನೆರವಂಡ ಉಮೇಶ್ ಸಮ್ಮೇಳನಾಧ್ಯಕ್ಷರ ಪರಿಚಯವನ್ನು ಹಾಗೂ ಪತ್ರಕರ್ತ ಅಶ್ರಫ್ ಚೆಯ್ಯಂಡಾಣೆ ನೆನಪಿನಂಗಳದಲ್ಲಿ ಪುಸ್ತಕ ಬರೆದ ಲೇಖಕ ಸಿ.ಎ.ಮೊಹಮ್ಮದ್ ನಿಝಾರ್ ಸಖಾಫಿ ಅವರ ಪರಿಚಯ ಮಾಡಿದರು.

ಈ ಸಂದರ್ಭ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಮೋಹನ್‌ದಾಸ್, ತಾಲೂಕು ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್, ನರಿಯಂದಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ತಹಶೀಲ್ದಾರ್ ಶ್ರೀಧರ್, ವೀರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ರೇವತಿ ರಮೇಶ್, ಕೋಶಾಧಿಕಾರಿ ಸಂಪತ್ ಕುಮಾರ್, ಸೋಮವಾರಪೇಟೆ ಅಧ್ಯಕ್ಷ ವಿಜೇತ್, ವಿರಾಜಪೇಟೆ ಅಧ್ಯಕ್ಷ ರಾಜೇಶ್ ಪದ್ಮನಾಭ, ಮೂರ್ನಾಡು ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಎ.ಲೋಕೇಶ್ ಕುಮಾರ್, ಮೇದುರ ಗಣು ಕುಶಾಲಪ್ಪ, ಕಸಾಪ ಜಿಲ್ಲಾ, ತಾಲೂಕು, ಹೋಬಳಿ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಲಹರಿ ತಂಡದಿAದ ನಾಡಗೀತೆ ಹಾಗೂ ಕಸಾಪ ತಂಡದಿAದ ರೈತ ಗೀತೆ ಮೊಳಗಿತು. ಸ್ವಾಗತ ಸಮಿತಿಯ ಉಪಾಧ್ಯಕ್ಷ ವಿನೋದ್ ನಾಣಯ್ಯ ಸ್ವಾಗತಿಸಿ, ಬಾಳೆಯಡ ದಿವ್ಯ ಮಂದಪ್ಪ ಮತ್ತು ಬಿದ್ದಂಡ ನಾಣಿ ದೇವಯ್ಯ ನಿರೂಪಿಸಿದರು. ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ವಂದಿಸಿದರು.