ವೀರಾಜಪೇಟೆ, ಮೇ ೨೦: ಪ್ರತಿಭಾ ಪ್ರದರ್ಶನಕ್ಕೆ ಕ್ರೀಡಾಕೂಟಗಳು ವೇದಿಕೆಗಳಾಗಿವೆ ಎಂದು ವೀರಾಜಪೇಟೆಯ ಸಂತ ಅನ್ನಮ್ಮ ಚರ್ಚ್ನ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ.ಫಾ. ಜೇಮ್ಸ್ ಡೊಮಿನಿಕ್ ಅಭಿಪ್ರಾಯಪಟ್ಟರು.
ವೀರಾಜಪೇಟೆ ಸಂತ ಅನ್ನಮ್ಮ ಚರ್ಚ್ನ ಮಹಿಳಾ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರಥಮ ಬಾರಿಗೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ಕ್ರಿಶ್ಚಿಯನ್ ಕಪ್ ಸೀಸನ್ ೧ ಪ್ರಯುಕ್ತ ಜಿಲ್ಲಾ ಮಟ್ಟದ ಮಹಿಳೆಯರ ಥ್ರೋ ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ನಮ್ಮ ಧರ್ಮಕೇಂದ್ರದ ವತಿಯಿಂದ ಇದೇ ಪ್ರಥಮ ಬಾರಿಗೆ ಮಹಿಳೆಯರ ಥ್ರೋ ಬಾಲ್ ಪಂದ್ಯಾಟವನ್ನು ಮಹಿಳೆಯರೇ ಆಯೋಜಿಸಿದ್ದು ಗಮನಾರ್ಹವಾಗಿದೆ. ಮಹಿಳೆಯರು ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಹೊರ ಹೊಮ್ಮಿಸಲು ಇಂತಹ ಕ್ರೀಡಾಕೂಟಗಳ ಅಗತ್ಯವಿದೆ ಎಂದು ಹೇಳಿದರು.
ಅಮ್ಮತ್ತಿಯ ಸಂತ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಅಂತೋಣಿ ಚರ್ಚ್ನ ಗುರುಗಳು ಹಾಗೂ ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ಮಾತನಾಡಿ, ಇಂದು ಸಮಾಜದಲ್ಲಿ ಅನೇಕ ಕ್ಲಬ್‌ಗಳನ್ನು ಕಾಣುತ್ತಿದ್ದೇವೆ. ಮಹಿಳೆಯರೇ ಒಂದು ಕ್ಲಬ್ ಅನ್ನು ರಚಿಸಿ ಮೊದಲ ಬಾರಿಗೆ ಮಹಿಳಾ ಕ್ರೀಡಾಕೂಟವನ್ನು ಇಲ್ಲಿ ಆಯೋಜಿಸಿರುವುದು ವಿಶೇಷವಾಗಿದೆ. ಈ ಮಹಿಳಾ ಕ್ಲಬ್ ಮತ್ತಷ್ಟು ಕಾರ್ಯಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಮಾಡಲಿ ಎಂದು ಶುಭ ಕೋರಿದರು.
ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ಮಾತನಾಡಿ, ಮಹಿಳೆಯರು ಇಂದು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗದೆ ಸಮಾಜದ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿಯು ಅಂತರರಾಷ್ಟಿçÃಯ ಮಟ್ಟದಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತಿದ್ದು ಗಮನಾರ್ಹವಾಗಿದೆ. ಮಹಿಳೆಯರು ಯಶಸ್ವಿಯಾಗಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದರು.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಮರಿಯಾ ಸಿಕ್ವೇರಾ ಅವರು ಮಹಿಳಾ ಸ್ಪೋರ್ಟ್ಸ್ ಕ್ಲಬ್ ಅನ್ನು ಉದ್ಘಾಟಿಸಿ, ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ಸೇವಾದಳದ ರಾಜ್ಯ ಜಂಟಿ ಕಾರ್ಯದರ್ಶಿ ತೆರೆಸಾ ವಿಕ್ಟರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಮರಿಯಾ ಸಿಕ್ವೇರಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವೀರಾಜಪೇಟೆ ಮಹಿಳಾ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷೆ ಲೀಲಾ ಮ್ಯಾಥ್ಯೂ, ಉಪಾಧ್ಯಕ್ಷೆ ಅನಿತಾ ಶಾಮ್, ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ ಡೈಸಾ, ಸಿಸ್ಟರ್ ವಂದನಾ ಲೋಬೋ, ಶಿನಿ ಲೇಡೀಸ್ ಸ್ಪೋರ್ಟ್ ಕ್ಲಬ್ ಸದಸ್ಯರುಗಳು, ಧರ್ಮ ಕೇಂದ್ರದವರು, ಆಟಗಾರರು ಉಪಸ್ಥಿತರಿದ್ದರು. ಶಿಕ್ಷಕಿ ಸುನೀತಾ ಲೋಬೋ, ಮಿಲನ ಜೇಮ್ಸ್, ಶೈನಿ ಕೆ.ಆರ್ ನಿರ್ವಹಣೆ ಮಾಡಿದರು.