ಮಡಿಕೇರಿ, ಮೇ.೨೧: ೨೦೨೬-೨೭ನೇ ಸಾಲಿಗೆ ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್‌ಸಿ ಮತ್ತು ಎಸ್‌ಟಿ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ ರೂ. ೧ ಲಕ್ಷ ಆಗಿರುತ್ತದೆ. ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ಸ್ ಐಡಿ(SಂಖಿS Iಆ) ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ ವಿಳಾಸ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ಅನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ೮ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ-ಮಡಿಕೇರಿ ದೂ.ಸಂ. ೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ-ಮೊ.ಸಂ. ೯೬೩೨೨೨೫೮೪೭, ವೀರಾಜಪೇಟೆ ತಾಲೂಕು ಕಚೇರಿ-ಮೊ.ಸಂಖ್ಯೆ ೯೪೪೮೨೦೫೯೧೯, ಸೋಮವಾರಪೇಟೆ ತಾಲೂಕು ಕಚೇರಿ-ಮೊ.ಸಂಖ್ಯೆ ೮೭೬೨೪೭೬೭೯೦, ಸಹಾಯವಾಣಿ ಸಂಖ್ಯೆ-೮೦೫೦೭೭೦೦೦೪ ಈ ದೂರವಾಣಿ ಸಂಖ್ಯೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರ