ಕುಶಾಲನಗರ, ಮೇ.೨೧: ಕುಶಾಲನಗರ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ವಿ.ಪಿ ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಅನುಷ್ಠಾನ ವರದಿ ಬಗ್ಗೆ ಸಮಗ್ರ ಚರ್ಚೆ ನಡೆಯಿತು.

ಹೆಬ್ಬಾಲೆ ವ್ಯಾಪ್ತಿಯಲ್ಲಿ ಚೆಸ್ಕಾಂ ಉಪವಿಭಾಗ ಕಚೇರಿ ತೆರೆಯಲು ಪ್ರಸ್ತಾವನೆ ಬಗ್ಗೆ ಅಧ್ಯಕ್ಷರು ಅಧಿಕಾರಿಗಳ ಸಲಹೆ ಪಡೆದರು.

ಗ್ರಾಮೀಣ ವ್ಯಾಪ್ತಿಯ ರೈತರಿಗೆ ಈ ಮೂಲಕ ಹೆಚ್ಚಿನ ಸಹಕಾರವಾಗಲಿದೆ ಎಂದು ಹೇಳಿದ ವಿ.ಪಿ ಶಶಿಧರ್, ಹಿರಿಯ ಅಧಿಕಾರಿಗಳಿಗೆ ಸಮಗ್ರ ವಿವರದೊಂದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಇದರೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ಹಾಗೂ ಕಟ್ಟಡದ ಮೇಲ್ಗಡೆ ಹಾದುಹೋಗಿರುವ ವಿದ್ಯುತ್ ಲೈನ್‌ಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುಂಠಿಕೊಪ್ಪ ಪಟ್ಟಣದಲ್ಲಿ ಮುಖ್ಯ ರಸ್ತೆಯ ಬದಿಯಲ್ಲಿ ಕಟ್ಟಡದ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸದಸ್ಯರಾದ ರಫೀಕ್ ಖಾನ್ ಅಧಿಕಾರಿಗಳ ಗಮನಕ್ಕೆ ತಂದರು.

ಕುಶಾಲನಗರ ಸಮೀಪ ಗುಮ್ಮನಕೊಲ್ಲಿ ಬಳಿ ಇತ್ತೀಚೆಗೆ ೧೧ ಕೆ.ವಿ ವಿದ್ಯುತ್ ಲೈನ್ ತಗಲಿ ಬಾಲಕಿ ಸುಟ್ಟು ಅಸ್ವಸ್ಥಳಾಗಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಇಲಾಖೆಯ ಅಧಿಕಾರಿಗಳ ನಿರ್ಲಕ್ಷö್ಯದಿಂದ ಈ ರೀತಿಯ ಘಟನೆ ನಡೆದಿದೆ ಎಂದು ಅಧ್ಯಕ್ಷರಾದ ವಿ.ಪಿ ಶಶಿಧರ್, ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯರಾದ ಬಿ.ಡಿ ಅಣ್ಣಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಿಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ತಂತಿ ಸ್ಥಳಾಂತರಿಸಲು ತಿಳಿಸಿದರೂ ಸಂಬAಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದು ಮತ್ತು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪಡಿತರ ಚೀಟಿ ಮತ್ತು ಅಂಗನವಾಡಿಗಳ ಸಮಸ್ಯೆ, ಗೃಹಲಕ್ಷಿö್ಮ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಮತ್ತು ಪಾವತಿಯಾದ ಅನುದಾನದ ಬಗ್ಗೆ ಚರ್ಚೆ ನಡೆಯಿತು.

ಕುಶಾಲನಗರ ಕೆ.ಎಸ್.ಆರ್.ಟಿ.ಸಿ ಘಟಕ ಕಾಮಗಾರಿ ಬಗ್ಗೆ ಅಧ್ಯಕ್ಷರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಘಟಕ ಪ್ರಾರಂಭವಾದ ಸಂದರ್ಭ ಗ್ರಾಮಾಂತರ ಪ್ರದೇಶಗಳಿಗೆ ಹೆಚ್ಚುವರಿ ಬಸ್ ರೂಟ್‌ಗಳನ್ನು ಕಲ್ಪಿಸುವ ಬಗ್ಗೆ ಚರ್ಚೆ ನಡೆಯಿತು.

ಸುಂಟಿಕೊಪ್ಪದಿAದ ಕುಶಾಲನಗರ ಪ್ರಯಾಣಿಕರಿಗೆ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸುವುದು ಹಾಗೂ ಶಿರಂಗಾಲದಿAದ ಕುಶಾಲನಗರಕ್ಕೆ ಹೆಚ್ಚಿನ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭ ಸಭೆಯಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ.ಸಿ ಶಶಿ ಭೀಮಯ್ಯ, ಮುಸ್ತಫ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್ ಕೃಷ್ಣೇಗೌಡ, ಎಸ್.ಎಸ್ ವಿವೇಕಾನಂದ, ಶ್ರೀನಿವಾಸ್ ಕುಮಾರ್, ಯು.ಎಂ ಕಿಶೋರ್, ಫಿಲೋಮಿನಾ, ಎಸ್.ಎ ಶ್ರೀನಿವಾಸ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.