ನಾಪೋಕ್ಲು, ಮೇ ೨೨: ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ಗೊಲ್ಲ ಜನಾಂಗದವರಿಗಾಗಿ ತಾ. ೨೩ ಮತ್ತು ೨೪ ರಂದು ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಲಿದೆ.
ತಾ. ೨೩ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ಕ್ರೀಡಾಕೂಟದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಅರೆಯಂಡ ರಘು ಭೀಮಯ್ಯ ಮತ್ತು ಕ್ರೀಡಾ ಸಮಿತಿಯ ಅಧ್ಯಕ್ಷ ತೊತ್ತಿಯಂಡ ಅಜಂತ ನಾಣಯ್ಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕ ಪೊಂಕೆರ ಜೀವನ್ ಬೋಪಣ್ಣ, ನಿವೃತ್ತ ಹಿರಿಯ ಲೆಕ್ಕಾಧಿಕಾರಿ ಬೆಸ್ಕಾಂ ಇಲಾಖೆಯ ಬಿದ್ದಿಯಂಡ ನಂದ, ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಆರೋಗ್ಯ ಇಲಾಖೆಯ ಶುಶ್ರೂಷಕಿ ಪೊನ್ನಕಂಡ ಉಷಾ ಹರೀಶ್ ಪಾಲ್ಗೊಳ್ಳಲಿದ್ದಾರೆ. ಪುರುಷರಿಗೆ ಕ್ರಿಕೆಟ್ ಪಂದ್ಯಾಟ ,ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಹಗ್ಗ ಜಗ್ಗಾಟ ಹಾಗೂ ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆಯಲಿವೆ. ಫೈನಲ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ತಾ. ೨೪ ರಂದು ಬೆಳಿಗ್ಗೆ ೯ ಗಂಟೆಗೆ ನಡೆಯಲಿದೆ. ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಅರೆಯಂಡ ರಘು ಭೀಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್. ಪೊನ್ನಣ್ಣ, ಉದ್ಯಮಿ ಎಡಿಕೇರಿ ಪ್ರಸನ್ನ ,ನಿವೃತ್ತ ಮುಖ್ಯ ಶಿಕ್ಷಕಿಯರಾದ ಪೈತಾಡಿಯಂಡ ಪೊನ್ನಮ್ಮ, ಕೈಬಿಲೀರ ಪಾರ್ವತಿ ಪಾಲ್ಗೊಳ್ಳಲಿದ್ದಾರೆ.