ಕುಶಾಲನಗರ, ಮೇ ೨೫: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಕುಂದುಕೊರತೆಗಳ ಬಗ್ಗೆ ಚರ್ಚಿಸಲು ಕುಶಾಲನಗರ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ಸಭೆ ಏರ್ಪಡಿಸಲಾಗಿತ್ತು.
ಸೋಮವಾರಪೇಟೆ ಉಪ ವಿಭಾಗ ಪೊಲೀಸ್ ಉಪ ಅಧೀಕ್ಷಕ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ, ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರ ಸಮ್ಮುಖದಲ್ಲಿ ಸಮುದಾಯದ ಪ್ರಮುಖರು ತಮ್ಮ ಸಮಸ್ಯೆಗಳನ್ನು ಚರ್ಚಿಸಿದರು.
ಸೋಮವಾರಪೇಟೆ ಉಪ ವಿಭಾಗದ ಎಸ್.ಸಿ/ ಎಸ್.ಟಿ ಸಮುದಾಯದ ಮುಖಂಡರು ಮೂಲಭೂತ ಸೌಕರ್ಯಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಪೊಲೀಸ್ ಅಧಿಕಾರಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.