ಮಡಿಕೇರಿ, ಮೇ. ೨೫: ರಾಜ್ಯದಲ್ಲಿ ದ್ವೇಷ ಭಾಷಣ ಸಂಬAಧ ಸಂಘ ಪರಿವಾರದವರ ಮೇಲಿದ್ದ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಹಾಗೂ ಗೋರಕ್ಷಣೆ ನೆಪದಲ್ಲಿ ಗೂಂಡಾಗಿರಿ ನಡೆಯುತ್ತಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ನಗರದ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಗೋರಕ್ಷ ಣೆಯ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಲ್ಲದೆ ಸಂಘ ಪರಿವಾರದವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುತ್ತಿರುವ ಕ್ರಮವು ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರ ಎಂದು ಆರೋಪಿಸಿದರು.
ಈ ಸಂದರ್ಭ ಮಾತನಾಡಿದ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಉಸ್ಮಾನ್ ಸುಂಟಿಕೊಪ್ಪ,ರಾಜ್ಯ ಸರ್ಕಾರ ಕೋಮು ದ್ವೇಷ ಭಾಷಣ ಮಾಡಿದ ಸುಮಾರು ೧೮-೨೦ ಮಂದಿ ಸಂಘ ಪರಿವಾರದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆ ದಿರುವುದು ಖಂಡನೀಯ ಎಂದರಲ್ಲದೆ ಸರ್ಕಾರ ತನ್ನ ನಿಲುವನ್ನು ಬದಲಿಸಿಕೊಂಡು ಸಂಘ ಪರಿವಾರದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರುವುದನ್ನು ವಜಾಗೊಳಿಸಿ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮತ್ತೆ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ. ಮಾಜಿ ಅಧ್ಯಕ್ಷ ಅಬ್ದುಲ್ ಅಡ್ಕಾರ್,ನಗರ ಸಭಾ ಸದಸ್ಯರಾದ ಮನ್ಸೂರ್,ಬಷೀರ್ ಅಹ್ಮದ್,ಮೇರಿ ವೇಗಸ್,ನೀಮಾ ಅರ್ಷದ್ ,ಪಕ್ಷದ ಪದಾಧಿಕಾರಿಗಳು,ಕಾರ್ಯಕರ್ತರು ಪಾಲ್ಗೊಂಡಿದ್ದರು.