ವಿಶೇಷ ವರದಿ : ಈಶಾನ್ವಿ

ವೀರಾಜಪೇಟೆ, ಮೇ ೨೭: ೨೦೨೬-೨೭ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟಿಸಿದ್ದು, ತಾ. ೨೯ ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ವಿದ್ಯಾರ್ಥಿಗಳಿಗೆ ಈ ಬಾರಿ ೧೮ ದಿನಗಳ ಸುದೀರ್ಘ ದಸರಾ ರಜೆ ಇರಲಿದೆ. ಮೊದಲ ಅವಧಿ ಅಕ್ಟೋಬರ್ ೨ಕ್ಕೆ ಕೊನೆಗೊಂಡರೆ, ಎರಡನೇ ಅವಧಿ ಅಕ್ಟೋಬರ್ ೨೨ಕ್ಕೆ ಆರಂಭವಾಗಲಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರಲು ವಿಶೇಷ ಆಂದೋಲನಕ್ಕೂ ಶಿಕ್ಷಣ ಇಲಾಖೆ ಚಾಲನೆ ನೀಡಿದೆ.

ಶಾಲಾ ಪ್ರಾರಂಭೊತ್ಸವ

ಬೇಸಿಗೆಯ ರಜೆ ಮುಗಿಸಿ ತಾ. ೨೯ ರಂದು ಶಾಲೆಗೆ ಬರುವ ಮಕ್ಕಳನ್ನು ಸ್ವಾಗತಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಪ್ರಾರಂಭೋತ್ಸವವನ್ನು ಹಬ್ಬದಂತೆ ಆಚರಿಸಲು ಸಿದ್ಧತೆ ಕೈಗೊಂಡಿದೆ.

ಕಲಿಕೆ, ಪರೀಕ್ಷೆ ಫಲಿತಾಂಶದ ನಂತರ ವಾರ್ಷಿಕ ಬೇಸಿಗೆ ರಜೆ ಮುಗಿಸಿ ಶಾಲೆಯನ್ನು ಪುನರಾರಂಭಿಸುವ ಮೂಲಕ ಮಕ್ಕಳಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

ಹಬ್ಬದ ವಾತಾವರಣದಡಿ ಶೈಕ್ಷಣಿಕ ಕಾರ್ಯಗಳಿಗೆ ಚ್ಯುತಿಬಾರದಂತೆ ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ.

ಅದರಂತೆ ಜಿಲ್ಲೆಯ ಎಲ್ಲಾ ಶಾಲೆಗಳ ಪ್ರಾರಂಭೋತ್ಸವ ನಡೆಯುತ್ತಿದೆ. ಜಿಲ್ಲೆಯಲ್ಲಿ ಇಲಾಖೆಯ ಮಾರ್ಗಸೂಚಿಯಂತೆ ಶಾಲೆಗಳಿಗೆ ತಳಿರು ತೋರಣಗಳಿಂದ ಅಲಂಕರಿಸಿ ಮಕ್ಕಳನ್ನು ಶಾಲೆಗೆ ಆಹ್ವಾನಿಸಲು ಸಿದ್ಧವಾಗಿವೆ. ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ, ಅಂಬೇಡ್ಕರ್, ಏಕಲವ್ಯ ವಸತಿ ಶಾಲೆಗಳು ಮಕ್ಕಳನ್ನು ಸ್ವಾಗತಿಸಲು ಸಜ್ಜಾಗಿವೆ.

ಶಾಲಾ ಪ್ರಾರಂಭೋತ್ಸವದAದು ಶಾಲಾ ಆವರಣ, ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಕುಡಿಯಲು ನೀರು ಒದಗಿಸುವುದು, ಶೌಚಾಲಯ ಸುಸ್ಥಿತಿಯಲ್ಲಿಡುವುದು, ಬಿಸಿಯೂಟದ ವ್ಯವಸ್ಥೆ ಹಾಗೂ ತಳಿರು ತೋರಣಗಳಿಂದ ಅಲಂಕರಿಸಲು ಆಯಾ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ.

ಶಾಲೆಗಳಲ್ಲಿ ಶಾಲಾ ಆರಂಭೋತ್ಸವ ಮಾಡಿರುವ ಕುರಿತು, ಪಠ್ಯ ಪುಸ್ತಕ, ಬಟ್ಟೆ ವಿತರಣೆ ಕುರಿತು ಪರಿಶೀಲನೆ ಪ್ರಯತ್ನ ಇಲಾಖೆಯಿಂದ ನಡೆಯುತ್ತಿದೆ.

ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅನೇಕ ಶಾಲೆಗಳಲ್ಲಿ ಒಂದು ವಾರಗಳ ಹಿಂದೆಯೇ ಸ್ವಚ್ಛತಾ ಕಾರ್ಯಗಳನ್ನು ಕೈಗೊಂಡು ಸಿದ್ದತೆ ನಡೆಸಲಾಗಿದೆ.

ಶಾಲೆ ಸಿದ್ಧತೆ

ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳುವ ಉದ್ದೇಶದಿಂದ ಶಾಲೆಗಳಲ್ಲಿ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಜಮಾಯಿಸಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಂಡಿದ್ದರು. ಶಿಕ್ಷಕರು ವೇಳಾಪಟ್ಟಿ, ವಾರ್ಷಿಕ ಕ್ರಿಯಾಯೋಜನೆ ಹಾಗೂ ಪಾಠ ಯೋಜನೆಗಳ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಸಿದ್ಧತೆಯನ್ನೂ ಕೈಗೊಂಡಿದ್ದರು. ಶಾಲಾ ಕೊಠಡಿಗಳಲ್ಲಿನ ಕಸವನ್ನು ಗುಡಿಸಿ, ಧೂಳು, ಜಾಡ ಹಾಗೂ ನಿರುಪಯುಕ್ತ ಕಸಗಳನ್ನು ತೆಗೆದರು. ಜತೆಗೆ ಶಾಲಾ ಕೊಠಡಿಗಳನ್ನು ನೀರಿನಿಂದ ಸ್ವಚ್ಛಗೊಳಿಸಿ, ಕಪುö್ಪ ಹಲಗೆ, ಕಿಟಕಿ ಹಾಗೂ ಬಾಗಿಲುಗಳನ್ನು ಸ್ವಚ್ಛಗೊಳಿಸಿದರು. ಶಾಲಾವರಣದ ಕಾಪೌಂಡ್, ಅಡುಗೆ ಕೋಣೆ ಹಾಗೂ ಆಟದ ಮೈದಾನಗಳನ್ನೂ ಸ್ವಚ್ಛಗೊಳಿಸಲಾಗಿದೆ.

ಅಕ್ಷರ ದಾಸೋಹ ಎಂದಿನAತೆ

ಎAದಿನAತೆ ಅಕ್ಷರ ದಾಸೋಹ ನಡೆಯುತ್ತದೆ. ಶಾಲಾ ಪ್ರಾರಂಭೋತ್ಸವವಾದ್ದರಿAದ ಮಕ್ಕಳಿಗೆ ಸಿಹಿಯನ್ನು ಉಣಬಡಿಸಲು ಶಿಕ್ಷಕರು ಸಿದ್ಧತೆ ನಡೆಸಿದ್ದಾರೆ.

ಮುಖ್ಯಶಿಕ್ಷಕರ ಸಭೆ

ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾಯ ತಾಲೂಕು ಕೇಂದ್ರಗಳಲ್ಲಿ ಮುಖ್ಯಶಿಕ್ಷಕರ ಸಭೆಯನ್ನು ಕರೆದು ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನ ಹಾಗೂ ಶಾಲಾ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಗುಣಾತ್ಮಕವಾಗಿ ಕೈಗೊಳ್ಳುವಂತೆ ಸಭೆ ನಡೆಸಿ ಮನವರಿಕೆ ಮಾಡಿದ್ದರು. ಶಿಕ್ಷಕರು ಶಾಲಾ ಪ್ರಾರಂಭೋತ್ಸವಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಉತ್ಸಾಹದಿಂದ ಶಾಲಾ ಕಾರ್ಯಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ದಾಖಲಾತಿ ಹೆಚ್ಚಳಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ.

ಹೊರಗುಳಿದ ಮಕ್ಕಳಿಗಾಗಿ ವಿಶೇಷ ಆಂದೋಲನ

ಶಾಲೆಯಿAದ ಹೊರಗುಳಿದ ಮಕ್ಕಳನ್ನು ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ತರಲು ವಿಶೇಷ ಅಭಿಯಾನವನ್ನು ಘೋಷಿಸಿದೆ. ೬ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಜಿಲ್ಲಾ, ತಾಲೂಕು ಮತ್ತು ಗ್ರಾಮಮಟ್ಟದಲ್ಲಿ ಈ ಆಂದೋಲನ ಜಾರಿಗೆ ಬರಲಿದೆ. ಅರ್ಧಕ್ಕೆ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಮರು ದಾಖಲಾತಿ ಮಾಡಿಸುವ ಮೂಲಕ ಅವರಿಗೆ ಉತ್ತಮ ಭವಿಷ್ಯವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.