ಕೂಡಿಗೆ, ಮೇ. ೨೮: ಕೊಡಗು ಜಿಲ್ಲಾ ಪಂಚಾಯಿತಿ, ಕೂಡುಮಂಗಳೂರು ಗ್ರಾಮ ಪಂಚಾಯಿತಿ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಯುಕ್ತ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು. ೪೧ ಮಂದಿ ರಕ್ತದಾನ ಮಾಡಿದರು.

ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ. ಕರುಂಬಯ್ಯ ಮಾತನಾಡಿದರು.

ಈ ಸಂದರ್ಭ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಿ. ಪೂರ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರುಮೂಡ್ಲಿ ಗೌಡ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ರಕ್ತ ನಿಧಿ ಕೇಂದ್ರದ ತಂಡದವರು ಪಾಲ್ಗೊಂಡಿದ್ದರು.