ಮಡಿಕೇರಿ, ಮೇ.೨೯: ವಿಶ್ವ ಪರಿಸರ ದಿನಾಚರಣೆ-೨೦೨೬ ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ “ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕಾಗಿ.” ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನು ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಜೂ.೨ ರಂದು ಬೆಳಗ್ಗೆ ೦೯.೩೦ ಗಂಟೆಗೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲೆ ವಿಭಾಗದ ಜಿಮ್ನಾಸ್ಟಿಕ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. (ಈ ಸ್ಫರ್ದೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಡ್ರಾಯಿಂಗ್ ಶೀಟ್ ಮತ್ತು ಪ್ರಬಂಧ ಬರೆಯುವ ಹಾಳೆಯನ್ನು ಮಾತ್ರ ನೀಡಲಾಗುವುದು). ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ೦೮೨೭೨-೨೨೧೮೫೫, ೭೭೬೦೭೩೮೪೪೭, ೬೩೬೧೭೧೩೨೩೮ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ ಇವರನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಕಚೇರಿ-ಕೊಡಗು ಪರಿಸರ ಅಧಿಕಾರಿ ತಿಳಿಸಿದ್ದಾರೆ.