ಕುಶಾಲನಗರ, ಮೇ ೨೯: ಶ್ರೀರಂಗಪಟ್ಟಣ ಸಮೀಪದ ಬೆಳಗೊಳದಿಂದ ಕುಶಾಲನಗರ ತನಕ ರಾಷ್ಟಿçÃಯ ಹೆದ್ದಾರಿ ವಿಸ್ತರಣೆ ಮತ್ತು ಸುಧಾರಣೆ ಕಾಮಗಾರಿ ಕಳೆದ ಕೆಲವು ತಿಂಗಳುಗಳಿAದ ಬಿರುಸಿನಿಂದ ನಡೆಯುತ್ತಿದೆ. ಸುಮಾರು ೪೧೨೮ ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಬೈಲುಕೊಪ್ಪೆಯಿಂದ ಮೈಸೂರು ಕಡೆಗೆ ಈಗಾಗಲೇ ಆರಂಭಗೊAಡಿದ್ದು, ಚತುಷ್ಪಥ ರಸ್ತೆ ಕಾಮಗಾರಿ ಅಲ್ಲಲ್ಲಿ ಚುರುಕಿನಿಂದ ಸಾಗುತ್ತಿದೆ.
ಕುಶಾಲನಗರ ಸಮೀಪ ಬೈಲುಕುಪ್ಪೆಯಿಂದ ಟಿಬೆಟಿಯನ್ ಶಿಬಿರದ ಮೂಲಕ ತೆರಳುವ ಚತುಷ್ಪಥ ರಸ್ತೆ ಕಾಮಗಾರಿ ಕೂಡ ಬಹುತೇಕ ಪೂರ್ಣಗೊಂಡಿದ್ದು, ಮೈಸೂರು ಕೊಡಗು ಜಿಲ್ಲೆಯ ಸಂಪರ್ಕ ಕಲ್ಪಿಸುವ ಗುಡ್ಡೆಹೊಸೂರು ಸಮೀಪದ ತೆಪ್ಪದಕಂಡಿ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿ ಸದ್ಯದಲ್ಲಿಯೇ ಆರಂಭಗೊಳ್ಳಲಿದೆ. ಪಿರಿಯಾಪಟ್ಟಣ ಮತ್ತು ಹುಣಸೂರು ಪಟ್ಟಣಗಳ ಹೊರವಲಯಗಳಲ್ಲಿ ಕಾಮಗಾರಿ ಭರದಿಂದ ಸಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಇಲಾಖೆಯಿಂದ ಹಸಿರು ನಿಶಾನೆ ದೊರೆತಿದ್ದು, ಪಿರಿಯಾಪಟ್ಟಣ ಮತ್ತು ಹುಣಸೂರು ಸಮೀಪ ರಾಷ್ಟಿçÃಯ ಹೆದ್ದಾರಿ ನಡುವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಸಿದ್ಧತೆ ನಡೆದಿದೆ.
ಯೋಜನೆಯಿಂದ ತೊಂದರೆಗೆ ಒಳಗಾದ ಜನರಿಗೆ ಅಗತ್ಯ ಪರಿಹಾರ ಈಗಾಗಲೇ ಒದಗಿಸಲಾಗಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ೨೦೨೭ ಮಾರ್ಚ್ ಒಳಗಾಗಿ ಕಾಮಗಾರಿ ಸಂಪೂರ್ಣ ಪೂರ್ಣಗೊಳ್ಳಲಿದೆ ಎಂದು ಹೆದ್ದಾರಿ ಯೋಜನೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. - ಚಂದ್ರಮೋಹನ್