ಬೆಂಗಳೂರು, ಮೇ ೩೦: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ನಿಕಟಪೂರ್ವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಅವಿರೋಧವಾಗಿ ಆಯ್ಕೆಗೊಂಡರು. ವಿಧಾನಸೌಧದಲ್ಲಿ ಶನಿವಾರ ಸಂಜೆ ನಡೆದ ಕ್ಷಿಪ್ರ ಸಭೆಯಲ್ಲಿ ಶಿವಕುಮಾರ್ ಅವರ ಹೆಸರನ್ನು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಥÀಮವಾಗಿ ಸೂಚಿಸಿದರು. ನಿಕಟಪೂರ್ವ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಡಿಕೆಶಿ ಅವರ ಹೆಸರನ್ನು ಅನುಮೋದಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಸರ್ವ ಕಾಂಗ್ರೆಸ್ ಸದಸ್ಯರೂ ಒಕ್ಕೊರಲಿನ ಸಮ್ಮತಿಯಿತ್ತರು. ಈ ಆಯ್ಕೆ ಮೂಲಕ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಹಾದಿ ಸುಗಮವಾಗಿದೆ.

ಈ ಸಂದರ್ಭ ಕೇಂದ್ರ ಕಾಂಗ್ರೆಸ್ ವೀಕ್ಷಕರುಗಳಾದ ರಣದೀಪ್ ಸುರ್ಜೇವಾಲ, ಕೆ.ಸಿ. ವೇಣುಗೋಪಾಲ್ ಹಾಗೂ ಜೈರಾಂ ರಮೇಶ್ ಉಪಸ್ಥಿತರಿದ್ದರು. ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಡಿ.ಕೆ ಶಿವಕುಮಾರ್ ಅವರು ನಾಗರಬಾವಿಯ ದೈವ ಸನ್ನಿಧಾನಕ್ಕೆ ತೆರಳಿ ಅಜ್ಜಯ್ಯನ ದರ್ಶನ ಮಾಡಿ ಆಶೀರ್ವಾದ ಪಡೆದರು.

ಡಿ.ಕೆ. ಶಿವಕುಮಾರ್ ಅವರು ಮುಂದಿನ ಜೂನ್ ೩ ರ ಬುಧವಾರ ಸಂಜೆ ಸುಮಾರು ೪ ಗಂಟೆ ವೇಳೆಗೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಕೆಲವು ಪ್ರಮುಖರು ಸಚಿವರಾಗಿಯೂ ಪ್ರಮಾಣ ವಚನ ಸ್ವೀಕರಿಸಲಿರುವುದಾಗಿ ತಿಳಿದುಬಂದಿದೆ.

ಹಕ್ಕು ಮಂಡನೆ

ಶಾಸಕಾAಗ ಪಕ್ಷದ ನಾಯಕರಾಗಿ ಆಯ್ಕೆ ಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಪತ್ರದ ಮುಖೇನ ಆಹ್ವಾನ ನೀಡಿದ್ದಾರೆ.

೪ಐದನೇ ಪುಟಕ್ಕೆ

(ಮೊದಲ ಪುಟದಿಂದ)

ಜೂ. ೩ ರಂದು ಪ್ರಮಾಣ ವಚನ

ಜೂನ್ ೩ ರಂದು ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅಧಿಕೃತವಾಗಿ ತಿಳಿಸಿದರು.

ಈ ಸಂಬAಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಚಂದ್ರಶೇಖರ್ ಅವರು, ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗಾಜಿನಮನೆಯಲ್ಲಿ ಅತ್ಯಂತ ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಆರಂಭದಲ್ಲಿ ಪ್ರಮಾಣವಚನ ಸಮಾರಂಭದ ಸ್ಥಳದ ಬಗ್ಗೆ ಗೊಂದಲವಿತ್ತು. ಆದರೆ ಅಂತಿಮವಾಗಿ ಲೋಕಭವನದಲ್ಲಿ ನಡೆಸಲು ನಿರ್ಧರಿಸಲಾಯಿತು. ಡಿ.ಕೆ. ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಚಂದ್ರಶೇಖರ್ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಪ್ರಮಾಣವಚನ ಸಮಾರಂಭಕ್ಕೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ. ನಾವು ಯಾರಿಗೂ ಯಾವುದೇ ಪಾಸ್‌ಗಳನ್ನು ಸಹ ನೀಡುತ್ತಿಲ್ಲ. ತೈಲ ಬೆಲ ಏರಿಕೆ ಆಗಿರುವುದಿಂದ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಬೇಡ ಎಂದು ತೀರ್ಮಾನ ಮಾಡಲಾಗಿದೆ. ಕಾರ್ಯಕರ್ತರು ಸಹಕರಿಸುವಂತೆ ಮನವಿ ಮಾಡಿದರು.

ದೊಡ್ಡ ಪ್ರಮಾಣದ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಜನರನ್ನು ಕರೆತರಲು ರಾಜ್ಯದ ವಿವಿಧ ಭಾಗಗಳಿಂದ ಸುಮಾರು ೧೦,೦೦೦ ರಿಂದ ೧೫,೦೦೦ ಬಸ್‌ಗಳನ್ನು ಕಾಯ್ದಿರಿಸುವ ಬಗ್ಗೆ ಚರ್ಚೆಗಳು ನಡೆದವು. ಆದರೆ ಇಂಧನ ಬಿಕ್ಕಟ್ಟು ಮತ್ತು ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಅದನ್ನು ರದ್ದುಗೊಳಿಸಲಾಯಿತು ಮತ್ತು ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ನಡೆಸಬೇಕೆಂದು ಪಕ್ಷ ನಿರ್ದೇಶನ ನೀಡಿದೆ ಎಂದು ಹೇಳಿದರು.

‘ಯಾವುದೇ ವಿರೋಧವಿಲ್ಲ’

ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧ ಆಯ್ಕೆ ಬಳಿಕ ಹೊರಬಂದು ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ನೀಡಿದ ರಾಜೀನಾಮೆ ಅಂಗೀಕಾರವಾಗಿದೆ. ನೂತನ ನಾಯಕರಾಗಿ ಸಭೆಯಲ್ಲಿ ಸರ್ವಾನುಮತದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಸೂಚಿಸಿತ್ತು. ಆಯ್ಕೆ ಪ್ರಕ್ರಿಯೆ ಸುಗಮವಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಯಾವುದೇ ರೀತಿಯ ವಿರೋಧ ವ್ಯಕ್ತವಾಗಿಲ್ಲ ಎಂದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿಗೆ ಮಾತ್ರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದೊಂದಿಗೆ ಸದಾ ಇರಲಿದ್ದಾರೆ ಎಂದು ಹೇಳಿದರು. ಶಾಸಕಾಂಗ ಪಕ್ಷದ ನಾಯಕ ಮಾತ್ರ ಬದಲಾಗಿದೆ. ೨೦೨೮ಕ್ಕೆ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿಯೇ ಕಾಂಗ್ರೆಸ್ ಸರ್ಕಾರ ಮತ್ತೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.