ಮಡಿಕೇರಿ, ಮೇ ೩೦: ಮಡಿಕೇರಿಯಲ್ಲಿರುವ ಐತಿಹಾಸಿಕ ರಾಜರ ಕೋಟೆಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಹಾಗೂ ಅವಶೇಷಗಳ ಕಾಯ್ದೆ ೧೯೫೮ರ ಅಡಿಯಲ್ಲಿ ಸಂರಕ್ಷಿತ ಸ್ಮಾರಕವೆಂದು ಘೋಷಿಸಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಸಂಸದ ಯದುವೀರ್ ಒಡೆಯರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮೈಸೂರು - ಕೊಡಗು ಸಂಸದರಾದ ಯದುವೀರ್ ಒಡೆಯರ್ ಅವರು ತಾ. ೧೮.೩.೨೦೨೫ ರಂದು ಕೇಂದ್ರ ಸಚಿವರಿಗೆ ಪತ್ರ ಬರೆಯುವ ಮೂಲಕ ನಿರಂತರ ಪ್ರಯತ್ನ ನಡೆಸಿದ್ದರು. ಇದೀಗ ತಾ. ೨೧ ರಂದು ಸಂಸದರಿಗೆ ಪತ್ರ ಬರೆದಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ತಮ್ಮ ಪತ್ರದಲ್ಲಿ ಸಂಸದರ ಪತ್ರದ ಬಗ್ಗೆ ಉಲ್ಲೇಖಿಸಿ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮಡಿಕೇರಿಯ ರಾಜರ ಕೋಟೆಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಹಾಗೂ ಅವಶೇಷಗಳ ಕಾಯಿದೆ ೧೯೫೮ರ ಅಡಿಯಲ್ಲಿ ಸಂರಕ್ಷಿತ ಸ್ಮಾರಕವೆಂದು ಘೋಷಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.
ಅಲ್ಲದೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಡಿಕೇರಿ ಕೋಟೆಯ ಸಮಗ್ರ ಅಭಿವೃದ್ಧಿಗೆ ಸಂಬAಧಿಸಿದAತೆ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ. ಸಂದರ್ಶಕರ ಅನುಭವ ಮತ್ತು ಸಾರ್ವಜನಿಕರ ತೊಡಗಿಸಿಕೊಳ್ಳುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಡಿಜಿಟಲ್ ತಂತ್ರಜ್ಞಾನವನ್ನು ಹೊಂದಿರುವ ವಸ್ತು ಸಂಗ್ರಹಾಲಯವಾಗಿ ಕೋಟೆಯನ್ನು ಅಭಿವೃದ್ಧಿಪಡಿಸುವ ಕುರಿತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು, ತಮ್ಮ ಪತ್ರದಲ್ಲಿನ ಸಲಹೆಗಳನ್ನು ಪರಿಗಣಿಸಲಾಗಿದೆ ಎಂದು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪತ್ರದಲ್ಲಿ ತಿಳಿಸಿದ್ದಾರೆ.