ಮಡಿಕೇರಿ, ಮೇ ೩೦: ಕೊಡಗಿನ ಶಾಸಕದ್ವಯರಾದ ಎ.ಎಸ್. ಪೊನ್ನಣ್ಣ ಹಾಗೂ ಡಾ. ಮಂತರ್ ಗೌಡ ಅವರುಗಳಿಗೆ ರಾಜ್ಯ ಸರಕಾರದ ಸಚಿವ ಸಂಪುಟದಲ್ಲಿ ಸ್ಥಾನ ದೊರಕುವಂತಾಗಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ನಗರದ ಕೋಟೆ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಕೆಪಿಸಿಸಿ ಸದಸ್ಯ ನಂದಕುಮಾರ್, ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರಸ್ ಅಧ್ಯಕ್ಷೆ ಶಶಿ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್, ಪ್ರಚಾರ ಸಮಿತಿಯ ಮಡಿಕೇರಿ ಬ್ಲಾಕ್ ಅಧ್ಯಕ್ಷ ವಿ.ಜಿ. ಮೋಹನ್, ಉಪಾಧ್ಯಕ್ಷ ದೇರಾಜೆ ಕಿರಣ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ, ಮನು ಮುದ್ದಪ್ಪ, ಪ್ರಚಾರ ಸಮಿತಿ ಕಾರ್ಯದರ್ಶಿ ಕೀರ್ತನ್ ಮೂವನ್, ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ಪ್ರಮುಖರಾದ ಶರಣ್, ವಸಂತ್ ಭಟ್, ಅರ್ಜುನ್, ಕೋಚನ ಚೇತನ, ಮಿನಾಝ್ ಪ್ರವೀಣ್, ಹಬೀಬ್, ಜಿ.ಸಿ. ಜಗದೀಶ್ ಇನ್ನಿತರರು ಉಪಸ್ಥಿತರಿದ್ದರು.