ಕುಶಾಲನಗರ, ಮೇ ೩೦: ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಆರ್‌ಆರ್‌ಟಿ ತಂಡದ ವತಿಯಿಂದ ಪಟ್ಟಣದ ಸೋಮೇಶ್ವರ ಬಡಾವಣೆಯಲ್ಲಿ ಡೆಂಗ್ಯೂ ಮತ್ತು ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ಕಾಯಿಲೆಗಳ ಮುಂಜಾಗ್ರತಾ ಕ್ರಮವಾಗಿ ಜನರಿಗೆ ಆರೋಗ್ಯ ಶಿಕ್ಷಣವನ್ನು ನೀಡುವ ಕಾರ್ಯಕ್ರಮ ನಡೆಯಿತು. ನಾಲ್ಕು ತಂಡಗಳು ಬಡಾವಣೆಯ ೯೮ ಮನೆಗಳಲ್ಲಿ, ೪೩೧ ತಾಣಗಳಲ್ಲಿ ಲಾರ್ವ ಸಮೀಕ್ಷೆಯನ್ನು ಮಾಡುವ ಮೂಲಕ ೧೧ ತಾಣಗಳಲ್ಲಿ ಲಾರ್ವ ಪತ್ತೆ ಮಾಡಲಾಯಿತು. ಮನೆ ಸದಸ್ಯರ ಸಹಾಯದಿಂದ ಲಾರ್ವವನ್ನು ನಾಶಪಡಿಸಲು ಕ್ರಮ ಕೈಗೊಳ್ಳಲಾಯಿತು. ತಾಲೂಕು ಆರೋಗ್ಯ ಅಧಿಕಾರಿ ಡಾ ಇಂದೂಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಪೂರ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞ ಜನಾರ್ದನ್ ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದರು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.