ಮಡಿಕೇರಿ, ಮೇ ೩೧: ರಾಜೀವ್ ಗಾಂಧಿ ವಸತಿ ನಿಗಮದ ಸೂಚನೆಯಂತೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)-೨.೦ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಸಲ್ಲಿಸಲು ಜೂನ್ ೩೦ ರವರೆಗೆ ಕಾಲಾವಕಾಶ ನೀಡಿದೆ.
ಈ ಯೋಜನೆಯಡಿ ಇದುವರೆಗೂ ಯಾವುದೇ ವಸತಿ ಯೋಜನೆಯಡಿ ಸೌಲಭ್ಯ ಪಡೆಯದೇ ಇರುವ ವಸತಿ ರಹಿತರು (ನಿವೇಶನ/ ಹಳೆಯ ಕಚ್ಚಾಮನೆ ಉಳ್ಳವರು) ಹಾಗೂ ನಿವೇಶನ ರಹಿತ ಮಹಿಳೆಯರು, ಹಿರಿಯ ನಾಗರೀಕರು, ವಿಧುರರು, ವಿಶೇಷ ಚೇತನರು ಹಾಗೂ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿದಾರರು ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಓಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕ, ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು, ನಿವೇಶನ/ ಹಳೆಯ ಕಚ್ಚಾಮನೆ ದಾಖಲೆಗಳೊಂದಿಗೆ hಣಣಠಿs/ಠಿmಚಿಥಿ.uಡಿbಚಿಟಿ.gov.iಟಿ ದಲ್ಲಿ ಸ್ವಂತವಾಗಿ/ ಗ್ರಾಹಕ ಸೇವಾ ಕೇಂದ್ರಗಳಲ್ಲಿ/ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್ಲೈನ್ ಮೂಲಕ ಜೂನ್, ೩೦ ರೊಳಗೆ ಅರ್ಜಿ ಸಲ್ಲಿಸಲು ಕೋರಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ನಗರ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಯನ್ನು ಸಂಪರ್ಕಿಸುವAತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಕೋರಿದ್ದಾರೆ.