ಮಡಿಕೇರಿ, ಜೂ. ೧: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಇಲ್ಲಿನ ನ್ಯಾಯಾಲಯ ದಂಡ ಸಹಿತ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಒಳಪಡುವ ಕಡಗದಾಳು ಗ್ರಾಮದ ಕಾಫಿ ತೋಟದ ಲೈನ್‌ಮನೆಯಲ್ಲಿ ವಾಸವಿದ್ದ ಅಪ್ರಾಪ್ತ ಬಾಲಕಿಯರಿಬ್ಬರನ್ನು ಅವರ ತಾಯಿ ೧೬-೩-೨೦೨೦ರಲ್ಲಿ ತಮ್ಮ ಊರಿಗೆ ತೆರಳುವ ಸಂದರ್ಭ ಪರಿಚಯಸ್ಥರಾದ ಬಂಗಾಳ ಮೂಲದ ಆನಂದಿ ಮಂಡಲ್ ಎಂಬಾತನಲ್ಲಿ ಬಿಟ್ಟು ಹೋಗಿದ್ದರು. ಬಳಿಕ ಕೋವಿಡ್ ಸಾಂಕ್ರಾಮಿಕದಿAದಾಗಿ ಲಾಕ್‌ಡೌನ್ ಆದ್ದರಿಂದ ತಾಯಿಗೆ ಹಿಂದಿರುಗಲು ಅಸಾಧ್ಯವಾಗಿತ್ತು. ಈ ಸಂದರ್ಭದಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಆನಂದಿ ಬಾಲಕಿಯರ ಮೇಲೆ ಹಲವಾರು ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಬಾರಿ ಲೈಂಗಿಕ ಹಲ್ಲೆ, ಮಾನಭಂಗ ಮಾಡಿರುವದಾಗಿ ಬಾಲಕಿಯರ ತಾಯಿ ಮರಳಿ ಬಂದ ಬಳಿಕ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಂದು ಠಾಣಾಧಿಕಾರಿಯಾಗಿದ್ದ ಚಂದ್ರಶೇಖರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿದ್ದರು.
ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಕೆ. ಬಸವರಾಜು ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿ ೫ ವರ್ಷ ಸಜೆ ಮತ್ತು ರೂ. ೧೬ ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ, ನೊಂದ ಬಾಲಕಿಯರಿಗೆ ಸರಕಾರದಿಂದ ತಲಾ ರೂ. ೧ ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಬಿ.ಎಸ್. ರುದ್ರಪ್ರಸನ್ನ ವಾದ ಮಂಡಿಸಿದರು.