ಗೋಣಿಕೊಪ್ಪಲು, ಜೂ. ೨: ಶರವೇಗದಲ್ಲಿ ಬೆಳೆಯುತ್ತಿರುವ ಗೋಣಿಕೊಪ್ಪ ನಗರದಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಇದರೊಂದಿಗೆ ಅಡ್ಡಾದಿಡ್ಡಿ ವಾಹನ ನಿಲುಗಡೆ, ರಸ್ತೆ ಬದಿಯಲ್ಲಿ ಹಣ್ಣು ಹಾಗೂ ತರಕಾರಿ ವ್ಯಾಪಾರಸ್ಥರಿಂದ ಟ್ರಾಫಿಕ್ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಕಾನೂನು ಕ್ರಮಗಳನ್ನು ಬಿಗಿಗೊಳಿಸುವುದೆ ಸೂಕ್ತ ಮಾರ್ಗ ಎಂದು ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್ನ ಸ್ಥಾನೀಯ ಸಮಿತಿಯ ಅಧ್ಯಕ್ಷ ಕಡೇಮಾಡ ಸುನೀಲ್ ಮಾದಪ್ಪ ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕೊಡಗು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ, ಸ್ಥಾನೀಯ ಸಮಿತಿ ವತಿಯಿಂದ ಹರಿಶ್ಚಂದ್ರಪುರದ ಚೇಂಬರ್ ಆಫ್ ಕಾಮರ್ಸ್ನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗೋಣಿಕೊಪ್ಪ ವರ್ತಕರ ಸಂಘದ ಪದಾಧಿಕಾರಿಗಳ ಸಭೆಗೆ ಆಗಮಿಸಿದ ಗೋಣಿಕೊಪ್ಪ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಕಾಳೇಗೌಡ ಹಾಗೂ ಠಾಣಾಧಿಕಾರಿ ವೆಂಕಟೇಶ್ ಸಮ್ಮುಖದಲ್ಲಿ ಸಂಚಾರ ದಟ್ಟಣೆ ಕುರಿತು ಚರ್ಚೆ ನಡೆಸಲಾಯಿತು.
ಗೋಣಿಕೊಪ್ಪದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಪೊಲೀಸರು ಕಾನೂನು ಕ್ರಮಗಳನ್ನು ಬಿಗಿಗೊಳಿಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಲಭಿಸಲಿದೆ ಎಂದರು. ಸಭೆಯಲ್ಲಿ ಚೇಂಬರ್ನ ಪದಾಧಿಕಾರಿಗಳಾದ ಪೊನ್ನಿಮಾಡ ಸುರೇಶ್, ಕಿರಿಯಮಾಡ ಅರುಣ್ ಪೂಣಚ್ಚ, ಪ್ರಭಾಕರ್ ನೆಲ್ಲಿತ್ತಾಯ, ಬಿ.ಎನ್. ಪ್ರಕಾಶ್ ಹಲವು ಸಲಹೆಗಳನ್ನು ನೀಡಿದರು.
ಠಾಣಾಧಿಕಾರಿ ಕಾಳೇಗೌಡ ಮಾತನಾಡಿ, ಈಗಾಗಲೇ ಟ್ರಾಫಿಕ್ ಸಮಸ್ಯೆಯ ನಿಯಂತ್ರಣಕ್ಕೆ ಖುದ್ದಾಗಿ ಪರಿಶೀಲನೆ ಮಾಡಿದ್ದೇನೆ. ಸಣ್ಣಪುಟ್ಟ ಸಮಸ್ಯೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಟ್ರಾಫಿಕ್ ಸಮಸ್ಯೆಯ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಗೋಣಿಕೊಪ್ಪ ಸ್ಥಾನೀಯ ಚೇಂಬರ್ನ ನಿರ್ದೇಶಕಿ ಚೇಂದAಡ ಸುಮಿ ಸುಬ್ಬಯ್ಯ, ಪ್ರಾರ್ಥಿಸಿ, ಉಪಾಧ್ಯಕ್ಷ ಪೊನ್ನಿಮಾಡ ಸುರೇಶ್ ಸ್ವಾಗತಿಸಿ, ಪ್ರಭಾಕರ್ ನೆಲ್ಲಿತ್ತಾಯ ವಂದಿಸಿದರು. ಪ್ರಮುಖರಾದ ಕಾಡ್ಯಮಾಡ ಗಿರೀಶ್ ಗಣಪತಿ, ಗಣೇಶ್ರೈ, ರಾಜಶೇಖರ್, ಲಕ್ಷಿö್ಮರೆಡ್ಡಿ, ಮೆಹರೂಫ್, ಎಂ.ಎA.ನಾಗೇಶ್, ಮಲ್ಚಿರ ಗಾಂಧಿ ದೇವಯ್ಯ, ಉಮ್ಮರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.