ಸೋಮವಾರಪೇಟೆ, ಜೂ. ೨: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ತಾ. ೩ ರಂದು ಸಂಜೆ ೪ ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅಂದು ಪಟ್ಟಣದಲ್ಲೂ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಖಾಸಗಿ ಬಸ್ ನಿಲ್ದಾಣ ಮತ್ತು ಕಕ್ಕೆಹೊಳೆ ಸಮೀಪದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮಾಣ ವಚನ ಕಾರ್ಯಕ್ರಮವನ್ನು ಎಲ್‌ಇಡಿ ಮೂಲಕ ಪ್ರದರ್ಶಿಸಲಾಗುವುದು ಎಂದು ಹೇಳಿದರು.
ಅಪರಾಹ್ನ ೩.೩೦ ಸಮಯಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿಗೆ ಆಗಮಿಸಲಿದ್ದು, ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಕಾರ್ಯಕ್ರಮದ ನಂತರ ಸಿಹಿ ಹಂಚಲಾಗುವುದು ಎಂದು ಹೇಳಿದರು. ಗೋಷ್ಠಿಯಲ್ಲಿ ಪಕ್ಷದ ಉಪಾಧ್ಯಕ್ಷ ಬಸವರಾಜು, ಕಾರ್ಯದರ್ಶಿ ಕೆ.ಜೆ. ಸುನಿಲ್, ಖಜಾಂಚಿ ಸಿ.ಈ. ಚೇತನ್, ಜಿಲ್ಲಾ ಕಾರ್ಯದರ್ಶಿ ಜನಾರ್ಧನ್ ಇದ್ದರು.