ವೀರಾಜಪೇಟೆ, ಜೂ. ೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬಿ.ಸಿ. ಟ್ರಸ್ಟ್ ವೀರಾಜಪೇಟೆ ವತಿಯಿಂದ ಹೆಗ್ಗಳ ಗ್ರಾಮದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸ್ಥಳೀಯರು, ಸಂಘದ ಸದಸ್ಯರಾದ ಮುತ್ತಮ್ಮ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಗೀತಾ ಹಾಗೂ ಹೆಗ್ಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಜಾತಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಉದ್ದೇಶ, ಸಾಮಾಜಿಕವಾಗಿ, ಮಾನಸಿಕವಾಗಿ ಹೇಗೆ ಬಲಿಷ್ಠರಾಗಿರಬೇಕು, ಹಾಗೂ ದುಶ್ಚಟಗಳ ಬಗ್ಗೆ ಸಂಘದ ಸದಸ್ಯರುಗಳಿಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದರು.

ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿ ಹರೀಶ್, ಒಕ್ಕೂಟ ಅಧ್ಯಕ್ಷೆ ಪುಷ್ಪಾವತಿ, ಮೇಲ್ವಿಚಾರಕ ಶಿವಕುಮಾರ್, ಸೇವಾ ಪ್ರತಿನಿಧಿ ಪುಷ್ಪ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.