ಮಡಿಕೇರಿ, ಜೂ. ೨: ಕಂದಾಯ ನಿಗದಿ ನೆಪದಲ್ಲಿ ಕೊಡವರ ಐನ್‌ಮನೆಗಳ ಮೇಲೆ ಗ್ರಾಮ ಪಂಚಾಯಿತಿಯಿAದ ಮನಸೋಇಚ್ಛೆ ಕಂದಾಯ ವಿಧಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಇದನ್ನು ತಕ್ಷಣವೇ ಪರಿಷ್ಕರಿಸಿ ಕೊಡಗಿನಲ್ಲಿರುವ ಐನ್‌ಮನೆಗಳಿಗೆ ಸಂಪೂರ್ಣ ಕಂದಾಯ ವಿನಾಯಿತಿ ನೀಡುವಂತೆ ಯುನೈಟೆಡ್ ಕೊಡವ ಆರ್ಗನೈಸೇಷನ್ - ಯುಕೊ ಸಂಘಟನೆ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡಗಿನಲ್ಲಿರುವ ಐನ್‌ಮನೆಗಳು ಕೊಡವರ ಪ್ರತಿ ಒಕ್ಕಕ್ಕೆ ಸಂಬAಧಿಸಿದ ಕುಲದೈವ ಕಾರೋಣರ ದೈವನೆಲೆಯಾಗಿದ್ದು, ಇದಕ್ಕೆ ಶತಮಾನಗಳ ಹಿನ್ನಲೆಯಿದೆ. ಅವಿಭಕ್ತ ಕುಟುಂಬ ಪದ್ದತಿಯನ್ನು ಅನುಸರಿಸುತ್ತಿದ್ದ ಕೊಡವರ ಹಿರಿಯರು ಶತಮಾನಗಳ ಹಿಂದೆಯೇ ಅಂದಿನ ಅವಶ್ಯಕತೆಗಳಿಗನುಗುಣವಾಗಿ, ಬೃಹತ್ ಗಾತ್ರದ ಐನ್‌ಮನೆಗಳನ್ನು ನಿರ್ಮಿಸಿಕೊಂಡಿರುವುದಿದೆ. ಆ ಮೂಲಕ ಕೌಟುಂಬಿಕ ಆರಾಧನೆಗಳು ಹಾಗೂ ಆಚರಣೆಗಳನ್ನು ಐನ್‌ಮನೆಯಲ್ಲಿಯೇ ತಲೆತಲಾಂತರಗಳಿAದ ಇದುವರೆಗೂ ನಡೆಸಿಕೊಂಡು ಬರಲಾಗುತ್ತಿದೆ. ಇದೀಗಾಗಲೇ ಬಹುತೇಕ ಐನ್‌ಮನೆಗಳಲ್ಲಿ ಅವಿಭಕ್ತ ಕೌಟುಂಬಿಕ ವಾಸ ಕಂಡುಬರುತ್ತಿಲ್ಲವಾದರೂ, ಐನ್‌ಮನೆಯ ನಿರ್ವಹಣಾ ಕಾರಣಕ್ಕಾಗಿ ಆಯಾ ಕುಲಕ್ಕೆ ಸಂಬAಧಿಸಿದ ಒಂದು ಕುಟುಂಬ ಸೇವಾರ್ಥ ಐನ್‌ಮನೆಗಳಲ್ಲಿ ವಾಸಮಾಡುತ್ತಿರುವುದನ್ನು ಕಾಣಬಹುದಾಗಿದೆ. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಇನ್ನು ಕೆಲವು ಐನ್‌ಮನೆಗಳಲ್ಲಿ ಯಾರೂ ವಾಸಿಸದೇ ಬೀಗ ಹಾಕಿ ಇಟ್ಟಿರುವ ಪರಿಸ್ಥಿತಿಗಳೂ ಇದೆ. ಈ ಐನ್‌ಮನೆಗಳು ಸಮಸ್ತ ಕುಲಕ್ಕೆ ಸಂಬAಧಿಸಿದ ದೇವ ನೆಲೆಯಾಗಿದೆ. ಏನೇ ಇದ್ದರೂ ಇಂದಿನ ಪರಿಸ್ಥಿತಿಯಲ್ಲಿ ಐನ್‌ಮನೆಗಳನ್ನು ನಿರ್ವಹಿಸಿಕೊಂಡು ಹೋಗುವುದೇ ಬಹುದೊಡ್ಡ ಸವಾಲಾಗಿರುವಾಗ, ಸ್ಥಳೀಯ ಸಂಸ್ಥೆಗಳು ಈ ರೀತಿಯಾಗಿ ದುಬಾರಿ ಕಂದಾಯ ವಿಧಿಸಲು ಮುಂದಾಗಿರುವುದು ಖಂಡನೀಯವೆAದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐನ್‌ಮನೆಗಳನ್ನು ಇಂದು ಕೊಡವ ಪರಂಪರೆಯ ಧ್ಯೋತಕವಾಗಿ ಉಳಿಸಿಕೊಂಡು ನಿರ್ವಹಿಸಲಾಗುತ್ತಿದೆ. ಅದಕ್ಕಾಗಿ ವಾರ್ಷಿಕ ಬಹು ದೊಡ್ಡ ವೆಚ್ಚವನ್ನು ಕುಟುಂಬ ಸದಸ್ಯರು ಭರಿಸಬೇಕಾಗುತ್ತದೆ. ಇದಕ್ಕೇ ಹೆಣಗಾಡುವ ಪರಿಸ್ಥಿತಿಯಲ್ಲಿ ನಾವಿರುವಾಗ, ಈಗ ಏಕಾಏಕಿ ನಾಲ್ಕು ಪಟ್ಟು ಹೆಚ್ಚುವರಿ ಕಂದಾಯವನ್ನು ಹೇರುತ್ತಿರುವುದು ಗಾಯದ ಮೇಲೆ ಬರೆಎಳೆದಂತೆ ಆಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಐನ್‌ಮನೆಗಳಿಗೆ ಅವುಗಳ ಗಾತ್ರಗಳಿಗನುಸಾರ, ಚದರ ಅಡಿ ಲೆಕ್ಕಾಚಾರದಲ್ಲಿ ಹಾಗೂ ಪಟ್ಟಣ ಪಂಚಾಯಿತಿ, ಪುರಸಭೆ ವ್ಯಾಪ್ತಿಗೆ ಅನುಸಾರ ಕಂದಾಯ ಏರಿಕೆ ಮಾಡದಂತೆ ಒತ್ತಾಯಿಸಿರುವ ಮಂಜು ಚಿಣ್ಣಪ್ಪ, ಐನ್‌ಮನೆಗಳಿಗೆ ಸಂಪೂರ್ಣ ಕಂದಾಯ ವಿನಾಯಿತಿಯನ್ನು ಘೋಷಿಸುವಂತೆ ಅವರು ಆಗ್ರಹಿಸಿದ್ದಾರೆ.

ಈ ಕುರಿತಂತೆ ಶಾಸಕ ಪೊನ್ನಣ ಅವರ ಗಮನಕ್ಕೆ ತರಲಾಗುವುದು. ಹಾಗೆಯೇ ಸರ್ಕಾರವನ್ನೂ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದರು.

ಎಲ್ಲಾ ಐನ್‌ಮನೆಗಳಿಗೆ ಸಂಬAಧಿಸಿದವರು ಯಾರೂ ಸಹ ದುಬಾರಿ ಕಂದಾಯವನ್ನು ಕಟ್ಟದಂತೆ ಮನವಿ ಮಾಡಿದ್ದಾರೆ. ಒಂದುವೇಳೆ ಬಲವಂತವಾಗಿ ಕಂದಾಯವನ್ನು ವಸೂಲಿ ಮಾಡಲು ಮುಂದಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ತರಹದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ.

ಐನ್‌ಮನೆಗಳು ಈ ನಾಡಿನ ಪಾರಂಪರಿಕ ತಾಣಗಳಾಗಿದ್ದು, ಸಂಸ್ಕೃತಿಯ ಪ್ರತೀಕವಾಗಿ ನಿಂತಿರುವ ಸ್ಮಾರಕಗಳಾಗಿವೆ. ಇವುಗಳು ನಾಶವಾದರೆ ಈ ದೇಶದ ವೈವಿಧ್ಯತೆಗಳೇ ನಾಶವಾದಂತೆ ಹಾಗೂ ಈ ದೇಶದ ಭವ್ಯ ಪರಂಪರೆಯೊAದು ನಿರ್ನಾಮವಾದಂತೆಯೇ ಸರಿ. ಹೀಗಿರುವಾಗ ಐನ್‌ಮನೆಗಳ ರಕ್ಷಣೆಗೆ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.