ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವಂತೆ ನಾರಾಯಣ ಗೌಡರ ನೇತೃತ್ವದಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಪಿ. ರಾಜು ಸೇರಿದಂತೆ ಸದಸ್ಯರು ಒತ್ತಾಯಿಸಿದ್ದಾರೆ. ಮಂತರ್ ಗೌಡ ಅವರು ಯುವ ಸಂಘಟನೆಯ ಮೂಲಕ ಗ್ರಾಮೀಣ ಪ್ರದೇಶದ ಸಮಸ್ಯೆಗಳಿಗೆ ಸ್ಪಂದಿಸುವ, ಜನಸ್ನೇಹಿಯಾಗಿ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಂತ್ರಿ ಸ್ಥಾನವನ್ನು ನೀಡುವಂತೆ ಕೆ.ಪಿ. ರಾಜು ಒತ್ತಾಯಿಸಿದ್ದಾರೆ.

ಎಲ್ಲಾ ಜಾತಿ ಜನಾಂಗವನ್ನು, ಧರ್ಮಿಯರನ್ನು ಸಮಾನವಾಗಿ ಕಾಣುವ, ಶಾಸಕರಾಗಿ ಮೂರು ವರ್ಷದಲ್ಲಿ ದಿನನಿತ್ಯ ಸರಾಸರಿ ಸುಮಾರು ೧೮ ಗಂಟೆಗೂ ಅಧಿಕ ಕಾಲ ಸೇವೆ ಸಲ್ಲಿಸುತ್ತಿರುವ, ಉತ್ತಮ ಆಡಳಿತಗಾರ ಎಂದು ಜನ ಮನ್ನಣೆ ಪಡೆದಿರುವ ವೀರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ನಿಯೋಜಿತ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಪಿ.ಜಿ ರಾಜಶೇಖರ್ ಸೇರಿದಂತೆ ಸರ್ವ ಸದಸ್ಯರು ಒತ್ತಾಯಿಸಿದ್ದಾರೆ. ನೂತನ ಸರಕಾರ, ಶಾಸಕ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅವರ ಪಾಂಡಿತ್ಯ, ಜ್ಞಾನ, ದೂರದೃಷ್ಟಿ, ಚಿಂತನೆಗಳನ್ನು ಬಳಸಿಕೊಂಡು ಉತ್ತಮ ಆಡಳಿತ ನಡೆಸಲು ಸಾಧ್ಯವಾಗಲಿದೆ ಎಂದು ಸದಸ್ಯರುಗಳು ಅಭಿಪ್ರಾಯಪಟ್ಟಿದ್ದಾರೆ. ವೀರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘ ಅಗ್ರಹಿಸಿದೆ.

ಈ ಬಗ್ಗೆ ಸಂಘದ ಪರವಾಗಿ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಕಟ್ಟೇರ ವಿಶ್ವನಾಥ್ ಅವರು ಸಂವಿಧಾನ ಆಶಯಕ್ಕೆ ತಕ್ಕಂತೆ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿರುವ ಪೊನ್ನಣ್ಣ ಅವರು ಜನ ಸಾಮಾನ್ಯರಿಗೆ ಕೈಗೆ ಏಟುಕುವ, ತಮ್ಮ ಸರಳತೆ, ತಾಳ್ಮೆ, ಉತ್ತಮ ನಡವಳಿಕೆ ಮೂಲಕ ಜನ ಮನ ಹತ್ತಿರವಾಗಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಹೆಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಮಹದೇವಪ್ಪ ಅಭಿಮಾನಿಗಳ ಬಳಗ ಆಗ್ರಹಿಸಿದೆ. ಮಡಿಕೇರಿಯ ಫೀ.ಮಾ. ಕಾರ್ಯಪ್ಪ ವೃತ್ತ (ಸುದರ್ಶನ) ಬಳಿ ಸೇರಿದ ಅಭಿಮಾನಿಗಳು, ಘೋಷಣೆ ಕೂಗಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಅಭಿಮಾನಿ ಬಳಗದ ಕುಶಾಲನಗರ ತಾಲೂಕು ಅಧ್ಯಕ್ಷ ಮಂಜುನಾಥ್, ಮಹದೇವಪ್ಪ ಅವರು ದಲಿತ ವರ್ಗದ ಪ್ರತಿನಿಧಿಯಾಗಿ ಸುದೀರ್ಘ ಅವಧಿಯಿಂದ ರಾಜಕಾರಣದಲ್ಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲೂ ಪ್ರಥಮ ಪಟ್ಟಿಯಲ್ಲೇ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಘೋಷಿಸಬೇಕು. ಜೊತೆಗೆ ಡಿಸಿಎಂ ಪಟ್ಟ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಹೆಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದ ಮಡಿಕೇರಿ ತಾಲೂಕು ಅಧ್ಯಕ್ಷ ರಘು, ಸೋಮವಾರಪೇಟೆ ತಾಲೂಕು ಅಧ್ಯಕ್ಷ ವಿಜಯ ಕುಮಾರ್ ಮತ್ತಿತರರು ಇದ್ದರು. ವೀರಾಜಪೇಟೆಯ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ಎ.ಎಸ್ ಪೊನ್ನಣ್ಣ ರವರಿಗೆ ಸಚಿವ ಸ್ಥಾನ ಸಿಗಬೇಕೆಂದು ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಮಂಗಳವಾರ ಕಾಂಗ್ರೆಸ್ ಪ್ರಮುಖರು ವಿಶೇಷ ಪ್ರಾರ್ಥನೆ ಹಾಗೂ ಪೂಜೆ ನೆರವೇರಿಸಿದರು.

ದೇವಾಲಯದ ದೇವತಕ್ಕರು ಹಾಗೂ ಭಕ್ತ ಜನ ಸಂಘದ ಅಧ್ಯಕ್ಷರೂ ಆಗಿರುವ ಪರದಂಡ ಸುಮನ್ ಸುಬ್ರಮಣಿ, ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ, ಲವ ಚಿಣ್ಣಪ್ಪ, ಅನ್ನಡಿಂiÀ್ಣAಡ ದಿಲೀಪ್ ಕುಮಾರ್, ಪರದಂಡ ಪ್ರಿನ್ಸ್ ತಮ್ಮಯ್ಯ ಇದ್ದರು. ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಹೊಸ ಸರ್ಕಾರದಲ್ಲಿ ಮಂತ್ರಿ ಸ್ಥಾನ ಸಿಗಲೆಂದು ಭಾಗಮಂಡಲ ಸಣ್ಣಪುಲಿಕೋಟು ಗ್ರಾಮದ ಕುಯ್ಯಮುಡಿ ಮತ್ತು ಕಡವಡಿ ಕುಟುಂಬಸ್ಥರು ಕಡವಡಿ ಶ್ರೀ ಮಹಾವಿಷ್ಣುಮೂರ್ತಿ ಹಾಗೂ ಸಹ ಪರಿವಾರ ದೈವಸ್ಥಾನದ ಅಧ್ಯಕ್ಷ ಕುಯ್ಯಮುಡಿ ಲವ ಚರಣ, ಗೌರವ ಅಧ್ಯಕ್ಷ ಕೆ.ಕೆ ಪೂರ್ಣಯ್ಯ ಹಾಗೂ ಆಡಳಿತ ಮಂಡಳಿಯವರು ವಿಶೇಷ ಪೂಜೆ ಸಲ್ಲಿಸಿರುತ್ತಾರೆ. ಕೊಡಗು ಜಿಲ್ಲೆಯ ಶಾಸಕದ್ವಯರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಕೊಡಗು ಜಿಲ್ಲಾ ಕ್ರೆöÊಸ್ತ ಸೇವಾ ಸಂಘ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಅವರು ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಿಂದ ಅವಿರತ ಶ್ರಮ ವಹಿಸುತ್ತಿರುವ ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಸಚಿವ ಸ್ಥಾನವನ್ನು ಹೊಂದಲು ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು, ಸರ್ವ ಜನಾಂಗಗಳ ಪ್ರಗತಿಗಾಗಿ ಸ್ಪಂದಿಸಲು ಮತ್ತು ರಾಜ್ಯದ ಜನರ ಸೇವೆ ಮಾಡಲು ಇವರಿಬ್ಬರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕರ್ನಾಟಕ ಸರಕಾರದ ನೂತನ ಮಂತ್ರಿ ಮಂಡಲದಲ್ಲಿ ಪೊನ್ನಣ್ಣ ಅವರಿಗೆ ಪ್ರಮುಖ ಖಾತೆಯ ಮಂತ್ರಿಗಿರಿ ನೀಡುವುದರೊಂದಿಗೆ ಹಾಗೂ ವರ್ಷಗಳಿಂದ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯತೆ ಇಲ್ಲದೆ ವಂಚಿತವಾದ ಕೊರಗನ್ನು ನಿವಾರಿಸುವಂತೆ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಅವಕಾಶ ಮಾಡಿಕೊಡುವಂತೆ ಕೊಡಗು ಜಿಲ್ಲಾ ಬಂಟರ ಸಂಘ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಿಗೆ ಮನವಿ ಸಲ್ಲಿಸಿದೆ. ನೂತನ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶಶಿಕಲಾ ಅವರು, ಡಾ. ಮಂತರ್ ಗೌಡ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ರಾಜ್ಯದ ಪ್ರಗತಿಗೆ ಮತ್ತು ಉತ್ತಮ ಆಡಳಿತಕ್ಕೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರನ್ನು ಸಚಿವರನ್ನಾಗಿ ನೇಮಕ ಮಾಡುವಂತೆ ಗಿರಿಜನರ ಮುಖಂಡರು ಆಗ್ರಹಿಸಿದ್ದಾರೆ. ಯರವ ಸಮಾಜದ ಅಧ್ಯಕ್ಷ ಪಿ.ಕೆ. ಸಿದ್ದಪ್ಪ, ಆದಿವಾಸಿ ಮುಖಂಡರುಗಳಾದ ಜೆ.ಆರ್. ಪುಷ್ಪ, ಪಿ.ಎಂ. ಚುಬ್ರು, ಮಣಿಕುಂಞ, ಜಿ.ಪಂ. ಮಾಜಿ ಸದಸ್ಯೆ ಪಿ.ಆರ್. ಪಂಕಜ, ಪಿ.ಸಿ. ರಾಮು, ಬೋಜಪ್ಪ, ಶಶಿ.ಶಾಂತ, ಸೋಮ, ಕಾರಿ ಈ ಬಗ್ಗೆ ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ೨ ವಿಧಾನಸಭಾ ಕ್ಷೇತ್ರಗಳ ಶಾಸಕಧ್ವಯರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೊಡಗು ಜಿಲ್ಲೆ ಭೂಮಾಲೀಕರ ಹಾಗೂ ಮರ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅರವಿಂದ ಕುಟ್ಟಪ್ಪ, ಸಂಘದ ಉಪಾಧ್ಯಕ್ಷ ಕೆ.ಎ.ಆದಂ, ಸಂಘದ ಕಾನೂನು ಸಲಹೆಗಾರರಾದ ಪೂವಣ್ಣ, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಹಂಜ್ಹಾ, ಸದಸ್ಯರಾದ ಎಂ.ಎ.ಅಶ್ರಫ್, ಸಿ.ಎಂ.ಯಹ್ಯಾ ಆಗ್ರಹಿಸಿದ್ದಾರೆ. ಇಬ್ಬರು ಶಾಸಕರು ಉತ್ತಮ ಕೆಲಸ ಮಾಡುತ್ತಿದ್ದು, ಸಚಿವ ಸ್ಥಾನ ನೀಡಬೇಕು ಎಂದಿದ್ದಾರೆ. ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ವೀರಾಜಪೇಟೆ ಕೊಡವ ಸಂಘಗಳ ಒಕ್ಕೂಟದ ಅಧ್ಯಕ್ಷ ಮಾದಂಡ ಎಸ್. ಪೂವಯ್ಯ ಅವರು ಒತ್ತಾಯಿಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಿರುವಲ್ಲಿ ಶಾಸಕ ಪೊನ್ನಣ್ಣ ಯಶಸ್ವಿಯಾಗಿದ್ದು ಅವರಿಗೆ ಸಚಿವ ಸ್ಥಾನ ನೀಡುವಂತೆ ಎಂ.ಎಸ್. ಪೂವಯ್ಯ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಯುವ ವೇದಿಕೆ ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಯುವ ವೇದಿಕೆಯ ಅಧ್ಯಕ್ಷ ಬಾಳಾಡಿ ಮನೋಜ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಯುವ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದರೆ ಯುವ ಸಮೂಹಕ್ಕೆ ಮತ್ತಷ್ಟು ಬಲ ಬಂದAತ್ತಾಗುತ್ತದೆ ಮತ್ತು ರಾಜಕೀಯ ಸ್ಫೂರ್ತಿ ತುಂಬಿದAತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾನೂನು ಮತ್ತು ಆಡಳಿತಾತ್ಮಕವಾಗಿ ಉತ್ತಮ ತಿಳುವಳಿಕೆ ಹೊಂದಿರುವ ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಲು ಬಿರುನಾಣಿಯ ಮರೆನಾಡ್ ಕೊಡವ ಸಮಾಜ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ ಅವರು ಅಗ್ರಹಿಸಿದ್ದಾರೆ. ಕೊಡಗಿನ ಈರ್ವರು ಶಾಸಕರಿಗೆ ಮಂತ್ರಿ ಮಂಡಲ ಪುನರ್ ರಚನೆ ಸಂದರ್ಭ ಸಚಿವ ಸ್ಥಾನ ನೀಡಬೇಕು. ಅಂತೆಯೇ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ ಅವರನ್ನು ಎಂಎಲ್‌ಸಿ ಮಾಡಬೇಕೆಂದು ಕೆ.ಪಿ.ಸಿ.ಸಿ. ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಅಧ್ಯಕ್ಷ ಬಿ.ಈ. ಜಯೇಂದ್ರ ಅವರು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.

ಈರ್ವರು ಶಾಸಕರಿಗೆ ಮಂತ್ರಿಗಿರಿ ನೀಡುವುದರಿಂದ ಕೊಡಗು ಇನ್ನಷ್ಟು ಅಭಿವೃದ್ಧಿ ಕಾಣಲಿದೆ. ಧರ್ಮಸೇನಾ ಅವರನ್ನು ಎಂಎಲ್‌ಸಿ ಮಾಡಿ ಮಂತ್ರಿಗಿರಿ ನೀಡಿದರೆ ಪರಿಶಿಷ್ಟ ಜಾತಿ ವಿಭಾಗಕ್ಕೆ ನ್ಯಾಯ ಒದಗಿಸಿಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ವರಿಷ್ಠರು ಗಮನ ಹರಿಸಬೇಕೆಂದು ಜಯೇಂದ್ರ ಮನವಿ ಮಾಡಿದ್ದಾರೆ. ಸಿದ್ದಾಪುರ, ಜೂ. ೨: ಕಳೆದೆರಡು ದಿನಗಳಿಂದ ಗಾಳಿ ಮಳೆಗೆ ಸಿಲುಕಿ ನೆಲ್ಲಿಹುದಿಕೇರಿ ಗ್ರಾಮದ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು, ಕೆಲವು ಭಾಗದಲ್ಲಿ ವಿದ್ಯುತ್ ತಂತಿಗಳ ಮೇಲೆ ಮರಗಳು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಎರಡು ದಿನಗಳ ಕಾಲ ಗ್ರಾಮದಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ಗ್ರಾಮಸ್ಥರು ಸಮಸ್ಯೆಗೆ ಸಿಲುಕಿಕೊಂಡರು. ವಿದ್ಯುತ್ ಸಂಪರ್ಕ ಇಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಚೆಸ್ಕಾಂ ಸಿಬ್ಬಂದಿಗಳು ಹಗಲಿರುಳು ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಮರಗಳನ್ನು ತೆರವುಗೊಳಿಸುತ್ತಿದ್ದಾರೆ.

ಈತನ್ಮಧ್ಯೆ ಕೆಲವು ಕಾಫಿ ತೋಟಗಳಲ್ಲಿ ವಿದ್ಯುತ್ ತಂತಿಗಳ ಮೇಲೆ ಮರಗಳು ಬಿದ್ದು ಹಾನಿಯಾಗಿರುವ ಸ್ಥಳಗಳಿಗೆ ಭೇಟಿ ನೀಡಲು ಕಾಡಾನೆಗಳಿಂದಾಗಿ ಭಯದ ವಾತಾವರಣ ನಿರ್ಮಾಣವಾಗಿದೆ. ವಿದ್ಯುತ್ ನಿಗಮದ ಸಿಬ್ಬಂದಿಗಳು ಈಗಾಗಲೇ ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಸಿದ್ಧತೆಯನ್ನು ಕೈಗೊಂಡಿದ್ದಾರೆ.ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ತೀಯನ್ ಮಹಾಸಭಾ ಒತ್ತಾಯಿಸಿದೆ.

ಕೊಡಗಿನ ಅಭಿವೃದ್ಧಿಗೆ ಆದ್ಯತೆ ನೀಡಿರುವ ಶಾಸಕರು ಕಳೆದ ಮೂರು ವರ್ಷಗಳಲ್ಲಿ ಅನೇಕ ಪ್ರಗತಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇಬ್ಬರು ಸಜ್ಜನ ರಾಜಕಾರಣಿಗಳಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ಸಚಿವರಿಲ್ಲ ಎನ್ನುವ ಕೊಡಗಿನ ಕೊರತೆಯನ್ನು ತುಂಬಬೇಕು ಎಂದು ಮನವಿ ಮಾಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ವಾಭಿಮಾನಿ ಸಂಘಟನೆ ಕೊಡಗಿನ ಎರಡು ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದೆ. ಈ ಬಗ್ಗೆ ಜಿಲ್ಲಾ ಸಂಚಾಲಕ ಎಚ್.ಎಲ್ ದಿವಾಕರ್, ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಜಿಲ್ಲಾ ಸಂಚಾಲಕಿ ಪ್ರೇಮ ಕೃಷ್ಣಪ್ಪ, ನಗರ ಸಂಚಾಲಕ ವೇಣು ಕಿಶೋರ್, ನಗರ ಸಂಘಟನೆ ಸಂಚಾಲಕ ಎಚ್.ಎಲ್. ರಮೇಶ್ ಆಗ್ರಹಿಸಿದ್ದಾರೆ. ಮಡಿಕೇರಿ ಶಾಸಕ ಮಂತರ್ ಗೌಡ ಹಾಗೂ ವೀರಾಜಪೇಟೆ ಶಾಸಕ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್. ಪಿ. ಚಂದ್ರಶೇಖರ್ ಹಾಗೂ ಕಾಂಗ್ರೆಸ್ ಸಮಿತಿ ಸದಸ್ಯ ಎಂ.ಎ. ಖಲೀಲ್ ಪಾಷ ಒತ್ತಾಯಿಸಿದ್ದಾರೆ.

* ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಅವಕಾಶ ನೀಡಲು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಮಾಳೇಟಿರ ಬೆಲ್ಲು ಬೋಪಯ್ಯ ಹಾಗೂ ಗೋಣಿಕೊಪ್ಪ ಕಾಂಗ್ರೆಸ್ ಓಬಿಸಿ ಘಟಕದ ಅಧ್ಯಕ್ಷ ಪಿ.ಕೆ. ಪ್ರವೀಣ್ ಆಗ್ರಹಿಸಿದ್ದಾರೆ.ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ನೂತನ ಸರಕಾರದಲ್ಲಿ ಸಚಿವ ಸ್ಥಾನ ನೀಡಲು ಸಂಪಾಜೆ ಕಾಂಗ್ರೆಸ್ ಸಮಿತಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪಿ.ಎಲ್., ಪ್ರಮುಖರಾದ ವಿಜಯ ಕುಮಾರ್ ಕನ್ಯಾನ, ರಿತಿನ್ ಡೆಮ್ಮಲೆ, ಪರಮಲೆ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಜಿ. ಮೋಹನ್ ಒತ್ತಾಯಿಸಿದ್ದಾರೆ. ಡಾ. ಮಂತರ್ ಗೌಡ ಅವರು ಮಡಿಕೇರಿ ಕ್ಷೇತ್ರದ ಶಾಸಕರಾದ ನಂತರ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿಯೊಬ್ಬರ ಸಮಸ್ಯೆಗಳಿಗೆ ಖುದ್ದು ಸ್ಪಂದಿಸುತ್ತಿರುವ ಶಾಸಕರ ಸೇವೆ ರಾಜ್ಯಕ್ಕೂ ವ್ಯಾಪಿಸಿದರೆ ಯುವಶಕ್ತಿಗೆ ಪ್ರೇರಣೆಯಾಗುತ್ತದೆ. ಡಿ.ಕೆ. ಶಿವಕುಮಾರ್ ಅವರು ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನವನ್ನು ನೀಡಿ ರಾಜಕೀಯವಾಗಿ ಬಲ ತುಂಬಬೇಕು ಎಂದು ವಿ.ಜಿ. ಮೋಹನ್ ಮನವಿ ಮಾಡಿದ್ದಾರೆ. ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರಿಗೆ ಸಚಿವ ಸಂಪುಟದಲ್ಲಿ ಕೊಡವರ ಪರವಾಗಿ ಸಚಿವ ಸ್ಥಾನ ನೀಡುವಂತೆ ಅಮ್ಮತ್ತಿ ರೈತ ಸಂಘದ ಅಧ್ಯಕ್ಷರಾದ ಕಾವಾಡಿಚಂಡ ಯು. ಗಣಪತಿ ಅವರು ಒತ್ತಾಯಿಸಿದ್ದಾರೆ.ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರನ್ನು ಸಚಿವರನ್ನಾಗಿ ನೇಮಕ ಮಾಡುವಂತೆ ಗಿರಿಜನರು ತಮ್ಮ ಅಜ್ಜಯ್ಯನಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ಸಲ್ಲಿಸಿದರು.

ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಯಿರಸುಳಿ ಹಾಡಿಗೆ ತೆರಳಿದ ಗಿರಿಜನ ಮುಖಂಡರುಗಳು ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮಂತ್ರಿ ಸ್ಥಾನ ಲಭಿಸುವಂತೆ ಪ್ರಾರ್ಥನೆ ಸಲ್ಲಿಸಿದರು. ಆದಿವಾಸಿ ಮುಖಂಡರುಗಳಾದ ಪಿ.ಕೆ. ಸಿದ್ದಪ್ಪ, ಪಿ.ಎಂ. ಚುಬ್ರು, ಮಣಿಕುಂಞ, ಜೆ.ಆರ್. ಪುಷ್ಪ, ಜಿ.ಪಂ. ಮಾಜಿ ಸದಸ್ಯೆ ಪಿ.ಆರ್. ಪಂಕಜ, ಪಿ.ಸಿ. ರಾಮು, ಬೋಜಪ್ಪ, ಶಶಿ, ಶಾಂತ, ಸೋಮ, ಕಾರಿ ಮುಂತಾದವರು ಉಪಸ್ಥಿತರಿದ್ದರು. ನೂತನ ಮಂತ್ರಿಮAಡಲದಲ್ಲಿ ಶಾಸಕ ಮಂತರ್ ಗೌಡ ಅವರಿಗೆ ಮಂತ್ರಿ ಪದವಿ ನೀಡುವುದರೊಂದಿಗೆ ಹಲವು ವರ್ಷಗಳಿಂದ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯತೆ ಇಲ್ಲದೆ ವಂಚಿತವಾದ ಕೊರಗನ್ನು ನಿವಾರಿಸುವಂತೆ ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ರಾಜ್ಯ ಸರಕಾರದ ಹೊಸ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನವನ್ನು ನೀಡುವಂತೆ ವೀರಾಜಪೇಟೆ ಕೊಡವ ಸಮಾಜ ಒತ್ತಾಯಿಸಿದೆ.

ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅತೀ ಸೂಕ್ಷö್ಮ ಕೊಡವ ಜನಾಂಗಕ್ಕೆ ಈ ಮೂಲಕ ಸಚಿವ ಸ್ಥಾನ ನೀಡಿದಂತೆ ಆಗುತ್ತದೆ ಎಂದು ವೀರಾಜಪೇಟೆ ಕೊಡವ ಸಮಾಜದ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ಅಮ್ಮಣಿಚಂಡ ಎನ್ ರವಿ ಉತ್ತಪ್ಪ ಹಾಗೂ ಗೌರವ ಕಾರ್ಯದರ್ಶಿ ಮಾಳೇಟಿರ ಎ ಶ್ರೀನಿವಾಸ್ ಆಗ್ರಹಿಸಿದ್ದಾರೆ. ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಖಿಲ ಕೆಂಬಟ್ಟಿ ಸಮಾಜ ಹಾಗೂ ಕೆಂಬಟ್ಟಿ ಪೊಮ್ಮಕ್ಕಡ ಕೂಟ ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಸಮಾಜದ ಅಧ್ಯಕ್ಷ ಬಿಲ್ಲಿರಿಕುಟ್ಟಂಡ ಪ್ರಭು ಅಯ್ಯಪ್ಪ ಹಾಗೂ ಪದಾಧಿಕಾರಿಗಳು ಯಾವುದೇ ಸರಕಾರಗಳು ಅಧಿಕಾರಕ್ಕೆ ಬಂದರೂ ಕೊಡಗು ಸಚಿವ ಸ್ಥಾನದಿಂದ ವಂಚಿತವಾಗುತ್ತಿದೆ. ಪ್ರಸ್ತುತ ಬದಲಾದ ರಾಜಕೀಯ ಸನ್ನಿವೇಶದಲ್ಲಾದರೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಎಲ್ಲಾ ಜಾತಿ ಜನಾಂಗಗಳ ಪ್ರಗತಿಗಾಗಿ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ.

ಪೊನ್ನಣ್ಣ ಅವರಿಗೆ ಸಚಿವ ಸ್ಥಾನವನ್ನು ನೀಡಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಪ್ರಭು ಅಯ್ಯಪ್ಪ, ಕಾರ್ಯಾಧ್ಯಕ್ಷ ಬಾಳೆಕುಟ್ಟಂಡ ಉದಯ್ ಮಾದಪ್ಪ, ಉಪಾಧ್ಯಕ್ಷರಾದ ಚಿಮ್ಮಿಕುಟ್ಟಂಡ ನಿತೇಶ್, ಚಿಮ್ಮ ಅಯ್ಯಪ್ಪ, ಜೀವನ್, ಕಾರ್ಯದರ್ಶಿ ಮೂಳೆಕುಟ್ಟಂಡ ದಿನೇಶ್, ಕಿರಣ್, ಕುವಲೆಕುಟ್ಟಂಡ ಗಿರೀಶ್, ಚಿಮ್ಮಿಕುಟ್ಟಂಡ ಗಿರೀಶ್ ಬೆಳ್ಳಿಯಪ್ಪ, ಸಂತೋಷ್, ಮನು ಬಿದ್ದಪ್ಪ, ಮಂಜೇಶ್, ಡಾಲಿ ಉಮ್ಮಣ್ಣಕುಟ್ಟಂಡ, ಸುಬ್ರಮಣಿ ಚವರೇಕುಟ್ಟಂಡ, ಕೆಂಬಟ್ಟಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ರೋಹಿಣಿ, ಕಾರ್ಯಾಧ್ಯಕ್ಷೆ ಮೊಟ್ಟಕುಟ್ಟ ಭೋಜಮ್ಮ, ಕಾರ್ಯದರ್ಶಿ ವೈಶಾಲಿ, ಉಪಾಧ್ಯಕ್ಷ ವಿಲ್ಮ, ಚಟ್ಟಕುಟ್ಟ ಸುಬ್ಬಕ್ಕಿ, ಬಿಲ್ಲರಿಕುಟ್ಟಂಡ ಬಬಿತ, ಕೂಟದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.