ಪೊನ್ನಂಪೇಟೆ, ಜೂ. ೨: ೧೨ನೇ ಅಂತರರಾಷ್ಟಿçÃಯ ಯೋಗ ದಿನಾ ಚರಣೆ ಅಂಗವಾಗಿ ತಾ. ೨೧ ರಂದು ನಡೆಯಲಿರುವ ಕಾರ್ಯ ಕ್ರಮದ ಹಿನ್ನೆಲೆ ಪೂರ್ವಭಾವಿ ಸಭೆಯನ್ನು ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ನಡೆಸಲಾಯಿತು. ಆಶ್ರಮದ ಅಧ್ಯಕ್ಷರಾದ ಪರಹಿತಾನಂದಾಜಿ ಮಹಾರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಪ್ರತಿವರ್ಷದಂತೆ ಈ ವರ್ಷವೂ ಸರ್ಕಾರಿ ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಭಾಗವಹಿಸುವಿಕೆಯಿಂದ ಅಂತರರಾಷ್ಟಿçÃಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಯೋಗದ ಮಹತ್ವದ ಕುರಿತು ಜನಜಾಗೃತಿ ಮೂಡಿಸುವುದರ ಜೊತೆಗೆ ವ್ಯಸನಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನತೆಯ ಪಾತ್ರ ಹಾಗೂ ಸ್ವಾಸ್ಥö್ಯ ಸಮಾಜದ ನಿರ್ಮಾಣದಲ್ಲಿ ಯೋಗದ ಪಾತ್ರ ಎಂಬ ವಿಷಯಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಭಾರತ ಸರ್ಕಾರವು ಈ ವರ್ಷದ ಅಂತರರಾಷ್ಟಿçÃಯ ಯೋಗ ದಿನಾಚರಣೆಗೆ ನೀಡಿರುವ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ, ಎಂಬ ಘೋಷವಾಕ್ಯವನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಯೋಗ ದಿನದಂದು ಯೋಗಾಭ್ಯಾಸದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ ಕಲ್ಪಿಸುವುದು, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಟಿ ಶರ್ಟ್ ವಿತರಿಸುವುದು ಹಾಗೂ ಕಾರ್ಯ ಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭ ಅಂತರರಾಷ್ಟಿçÃಯ ಯೋಗ ಪಟು ಅಮೃತ್ ರಾಕೇಶ್, ಯೋಗ ಅರ್ಜುನ ಪ್ರಶಸ್ತಿ ವಿಜೇತೆ ಅಲಿಮಾ ಪಿ.ಎಚ್, ಸಂಪೂರ್ಣ ಸ್ವಾಸ್ಥö್ಯ ಯೋಗ ಕೇಂದ್ರದ ನಿರ್ದೇಶಕ ಸೋಮಯ್ಯ ಕೆ.ಕೆ ಉಪಸ್ಥಿತರಿದ್ದರು.