ಮಡಿಕೇರಿ, ಜೂ. ೩: ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ತಾ. ೪ ರಂದು ಬೆಳಿಗ್ಗೆ ೧೧.೩೦ ಗಂಟೆಯಿAದ ೧೨.೩೦ ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಮಧ್ಯಾಹ್ನ ೨.೩೦ ಗಂಟೆಯಿAದ ೩.೩೦ ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯು ತಾ. ೫ ರಂದು ಬೆಳಿಗ್ಗೆ ೧೧.೩೦ ಗಂಟೆಯಿAದ ೧೨.೩೦ ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ, ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಮಧ್ಯಾಹ್ನ ೦೨.೩೦ ಗಂಟೆಯಿAದ ೩.೩೦ ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ, ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ಸಭೆಯು ತಾ. ೬ ರಂದು ಮಧ್ಯಾಹ್ನ ೨.೩೦ ಗಂಟೆಯಿAದ ೦೩.೩೦ ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಗೋಣಿಕೊಪ್ಪ, ವೀರಾಜಪೇಟೆ, ಸೋಮವಾರಪೇಟೆ, ಕುಶಾಲನಗರ, ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.