ಮೈಸೂರು, ಜೂ. ೩: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬAಧಿಸಿದAತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬAಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕವನ್ನು ಉಂಟುಮಾಡಿವೆ, ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
ಭವಿಷ್ಯದ ಮೂಲಸೌಕರ್ಯ ಯೋಜನೆಯನ್ನು ಕೈಗೊಳ್ಳುವ ಮೊದಲು ಸಮಾಲೋಚನೆ ನಡೆಸಲಾಗುವುದು ಹಾಗೂ ಜಿಲ್ಲೆಯ ಪರಿಸರ, ಪರಿಸ್ಥಿತಿ ಮತ್ತು ಅಭಿವೃದ್ಧಿ ಸಂಬAಧಿತ ಹಿತಾಸಕ್ತಿಗಳನ್ನು ಪರಿಗಣಿಸಲಾಗುವುದು ಎಂದು ಸಂಸದರು ಒತ್ತಿಹೇಳಿದರು. ಕೊಡಗಿನ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸುವುದರ ಜೊತೆಗೆ ಅದರ ವಿಶಿಷ್ಟ ಪರಿಸರ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವುದು ತನ್ನ ಬದ್ಧತೆಯಾಗಿದೆ. ಅಲ್ಲದೆ, ಪ್ರದೇಶದ ಹಿತಕ್ಕಾಗಿ ಉತ್ತಮ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬAಧಿಸಿದ ವಿಷಯಗಳಲ್ಲಿ ರೈಲ್ವೆ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಊಹಾಪೋಹಗಳಿಂದ ಸಾರ್ವಜನಿಕರು ದಾರಿ ತಪ್ಪಬಾರದು. ಈ ವಿಷಯಕ್ಕೆ ಸಂಬAಧಿಸಿದ ಯಾವುದೇ ಅಧಿಕೃತ ಬೆಳವಣಿಗೆಯನ್ನು ಸೂಕ್ತ ಮಾರ್ಗಗಳ ಮೂಲಕ ಪಾರದರ್ಶಕವಾಗಿ ತಿಳಿಸಲಾಗುವುದು ಎಂದು ಯದುವೀರ್ ತಿಳಿಸಿದ್ದಾರೆ.