ಬೆಂಗಳೂರು, ಜೂ.೩: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜ್ಯ ರಾಜಧಾನಿ ಬೆಂಗಳೂರಿನÀ ಲೋಕಭವನದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರÀ ಹರ್ಷೋದ್ಗಾರಗಳ ನಡುವೆ ಡಿ.ಕೆ. ಶಿವಕುಮಾರ್ ಅವರು ಸಂಜೆ ೪.೧೫ ಕ್ಕೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವೇದಿಕೆಯಲ್ಲಿ ಇರಿಸಿದ್ದ ಅಜ್ಜಯ್ಯ ಸ್ವಾಮೀಜಿಯವರ ಛಾಯಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಡಿಕೆಶಿ ತಮ್ಮ ಅಧ್ಯಾತ್ಮಿಕ ಗುರು ವೀರಗಂಗಾಧರಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಡಿ.ಕೆ. ಶಿವಕುಮಾರ್ ಅವರ ಬಳಿಕ ನಿಕಟ ಪೂರ್ವ ಗೃಹ ಸಚಿವರಾಗಿದ್ದÀ ಡಾ. ಜಿ ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಳಿಕ ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿದ್ದ ೧೧ ಮಂದಿ ಸಚಿವರುಗಳು, ವಿಧಾನ ಸಭಾಪತಿಯಾಗಿದ್ದ ಯು.ಟಿ. ಖಾದರ್ ಹಾಗೂ ನೂತನವಾಗಿ ಸಚಿವರಾಗಿ ಆಯ್ಕೆಗೊಂಡ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಪ್ರಮಾಣ ವಚನ ಸ್ವೀಕರಿಸಿದರು. ಈ ಹಿಂದೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಕೆ.ಎಚ್. ಮುನಿಯಪ್ಪ, ಇಂಧನ ಸಚಿವರಾಗಿದ್ದ ಕೆ.ಜೆ ಜಾರ್ಜ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಎಂ.ಬಿ. ಪಾಟೀಲ್, ಸಾರಿಗೆ ಮತ್ತು ಮುಜರಾಯಿ ಸಚಿವರಾಗಿದ್ದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾಗಿದ್ದ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ, ಅರಣ್ಯ, ಜೈವಿಕ ಮತ್ತು ಪರಿಸರ ಖಾತೆ ಸಚಿವರಾಗಿದ್ದ ಈಶ್ವರ್ ಖಂಡ್ರೆ, ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾಗಿದ್ದ ಭೈರತಿ ಸುರೇಶ್ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾಗಿದ್ದ ಶರಣ ಪ್ರಕಾಶ್ ಪಾಟೀಲ್ ಅವರುಗಳು ಪ್ರಮಾಣವಚನ ಸ್ವೀಕರಿಸಿದರು.
ನಾಯಕರುಗಳು- ಧರ್ಮಗುರುಗಳು
ಸಮಾರಂಭದಲ್ಲಿ ರಾಜ್ಯ ಹಾಗೂ ರಾಷ್ಟç ಮಟ್ಟದ ವಿವಿಧ ನಾಯಕರುಗಳು ಹಾಗೂ ಅನೇಕ ಧರ್ಮಗುರುಗಳು ಹಾಜರಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕದ ಮಾಜೀ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಂಸದರುಗಳಾದ ರಣ್ ಜಿತ್ ಸಿಂಗ್ ಸುರ್ಜೇವಾಲ, ಕೆ.ಸಿ ವೇಣು ಗೋಪಾಲ್, ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ವಿಭು ಬಕ್ರು ಮೊದಲಾದವರು ಉಪಸ್ಥಿತರಿದ್ದರು.
ಲೋಕಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಮೊಹಮ್ಮದ್ ಅಝರುದ್ದೀನ್, ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಚಲನಚಿತ್ರ ನಟರಾದ ಜಯಮಾಲಾ, ೪ನಾಲ್ಕನೇ ಪುಟಕ್ಕೆ
(ಮೊದಲ ಪುಟದಿಂದ) ಧನಂಜಯ, ರಮ್ಯ ಮತ್ತು ಶಿವರಾಜಕುಮಾರ್, ಸಂಗೀತ ನಿರ್ದೇಶಕರುಗಳಾದ ಅರ್ಜುನ್ ಜನ್ಯ, ಗುರುಕಿರಣ್ ಸೇರಿದಂತೆ ವಿವಿಧ ವಿದೇಶಿ ದೂತಾವಾಸಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ವಿವಿಧ ಹಿಂದೂ ಮಠಾಧೀಶÀರುಗಳು, ಕ್ರಿಶ್ಚಿಯನ್ ಮತ್ತು ಇಸ್ಲಾಂ ಧಾರ್ಮಿಕ ಮುಖಂಡರುಗಳು ಆಗಮಿಸಿದ್ದರು. ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯ ಪಾಲ್ಗೊಂಡಿದ್ದರು.
ಲೋಕಭವನದ ಗ್ಲಾಸ್ ಹೌಸ್ಅನ್ನು ಕೆಂಪು ಮತ್ತು ಹಳದಿ ಬಣ್ಣಗಳಲ್ಲಿ ಅಲಂಕರಿಸಲಾಗಿತ್ತು, ಇದು ಕರ್ನಾಟಕದ ಧ್ವಜದ ಬಣ್ಣಗಳನ್ನು ಪ್ರತಿಬಿಂಬಿಸುತ್ತದೆ. ಜ್ಯೋತಿಷಿಯ ಸಲಹೆಯಂತೆ ವೇದಿಕೆಯನ್ನು ಪೂರ್ವಕ್ಕೆ ಮುಖ ಮಾಡಿ ಇರಿಸಲಾಗಿತ್ತು, ಇದನ್ನು ಶುಭವೆಂದು ಪರಿಗಣಿಸಲಾಗಿದೆ. ವೇದಿಕೆಗೆ ಹೋಗುವ ಮೊದಲು, ಶಿವಕುಮಾರ್ ಪ್ರಮಾಣವಚನ ಸಮಾರಂಭಕ್ಕಾಗಿ ನೆರೆದಿದ್ದ ವಿವಿಧ ಧಾರ್ಮಿಕ ನಾಯಕರ ಆಶೀರ್ವಾದ ಪಡೆದರು. ಅವರಲ್ಲಿ ಕೆಲವರು ಅವರ ಮೇಲೆ ಹೂದಳಗಳನ್ನು ಸುರಿಸಿದರೆ, ಇತರರು ಆಶೀರ್ವಾದ ಮತ್ತು ಸದ್ಭಾವನೆಯ ಸಂಕೇತವಾಗಿ ‘ರುದಾಕ್ಷ್ಷಿ ಮಾಲೆ' ನೀಡಿದರು. ಶಿವಕುಮಾರ್ ಅವರು ಕಂದು ಬಣ್ಣದ ರೇಷ್ಮೆ ಜುಬ್ಬಾ ಮತ್ತು ಕಾಂಗ್ರೆಸ್ ಪಕ್ಷದ ತ್ರಿವರ್ಣ ಧ್ವಜವನ್ನು ಹೊಂದಿರುವ ಶಾಲು ಧರಿಸಿದ್ದರು. ಪ್ರಮಾಣ ವಚನ ಸ್ವೀಕರಿಸುವ ಮೊದಲು ಶಿವಕುಮಾರ್ ಗಣ್ಯರನ್ನು ಸ್ವಾಗತಿಸಿದರು.
ಸೋನಿಯಾ ಹಾರೈಕೆ
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿಕೆ ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, "ನೀವು ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅಚಲ ವಿಶ್ವಾಸ ನನಗಿದೆ" ಎಂದು ಹೇಳಿದರು.
"ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಸಾಗಿ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ. ಭವಿಷ್ಯದಲ್ಲಿ ಯಶಸ್ವಿಯಾಗಲಿ" ಎಂದು ಅವರು ಡಿಕೆಶಿಗೆ ಹಾರೈಸಿದರು.
ಡಿ.ಕೆ. ಶಿವಕುಮಾರ್ ಪ್ರಮಾಣ ವಚನಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದು, ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಬೆಳೆದುಬಂದ ಹಾದಿ
ನೂತನ ಮುಖ್ಯಮಂತ್ರಿ ಬೆಳೆದು ಬಂದ ಹಾದಿಯ ಸಂಕ್ಷಿಪ್ತ ನೋಟ ಹೀಗಿದೆ:- ಡಿ.ಕೆ. ಶಿವಕುಮಾರ್ (ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್) ಅವರು ಭಾರತೀಯ ರಾಷ್ಷಿçÃಯ ಕಾಂಗ್ರೆಸ್ನ ಪ್ರಮುಖ ನಾಯಕರಾಗಿದ್ದು, ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಪ್ರವೇಶಿಸಿ, ಕನಕಪುರದ ಬಲಿಷ್ಠ ನಾಯಕರಾಗಿ ಬೆಳೆದು, ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಅವರ ಪಯಣದ ಪ್ರಮುಖ ಹಂತಗಳು ಇಲ್ಲಿವೆ. ರಾಜಕೀಯ ಪಯಣದ ಪ್ರಮುಖ ಮೈಲಿಗಲ್ಲುಗಳು ಆರಂಭಿಕ ರಾಜಕೀಯ (೧೯೮೦ರ ದಶಕ): ಎನ್ಎಸ್ಯುಐ ಮತ್ತು ಯುವ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದ ಅವರು, ೧೯೮೫ರಲ್ಲಿ ಮೊದಲ ಬಾರಿಗೆ ಸಾತನೂರು ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಪ್ರಭಾವಿ ನಾಯಕ ಹೆಚ್.ಡಿ. ದೇವೇಗೌಡರ ವಿರುದ್ಧ ಪರಾಜಿತರಾದರು. ಮೊದಲ ಶಾಸಕತ್ವ (೧೯೮೯): ಅದೇ ಸಾತನೂರು ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ ಸತತವಾಗಿ ಅದೇ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾ ಬಂದರು. ಸಂಪುಟದಲ್ಲಿ ಸ್ಥಾನ (೧೯೯೯): ಎಸ್.ಎಂ. ಕೃಷ್ಣ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲ ಬಾರಿಗೆ ನಗರಾಭಿವೃದ್ಧಿ ಸಚಿವರಾಗಿ ಮಹತ್ವದ ಜವಾಬ್ದಾರಿ ನಿರ್ವಹಿಸಿದರು. ಸಂಕಷ್ಟದ ದಿನಗಳು: ರಾಜಕೀಯ ಜೀವನದಲ್ಲಿ ಹಲವು ಕಾನೂನು ಸಮರಗಳು ಹಾಗೂ ಜೈಲುವಾಸದಂತಹ (೨೦೧೯) ಕಠಿಣ ಸವಾಲುಗಳನ್ನು ಎದುರಿಸಿದರು. ಆದರೂ ಪಕ್ಷದ ಸಂಕಷ್ಟದ ಸಮಯದಲ್ಲಿ ಬಿಕ್ಕಟ್ಟು ನಿರ್ವಹಣಾಕಾರರಾಗಿ ಗುರುತಿಸಿಕೊಂಡರು.
೨೦೨೦ ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿ, ರಾಜ್ಯದ ಉಪಮುಖ್ಯಮಂತ್ರಿಯಾದರು. ಇದೀಗ ಪಕ್ಷದ ಆಂತರಿಕ ಅಧಿಕಾರ ಹಂಚಿಕೆಯ ಒಪ್ಪಂದದAತೆ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವು ನಿರಂತರ ಹೋರಾಟ, ಸಂಘಟನಾ ಚಾತುರ್ಯ ಮತ್ತು ಹೈಕಮಾಂಡ್ನೊAದಿಗೆ ಉತ್ತಮ ಬಾಂಧವ್ಯದಿAದ ಕೂಡಿದೆ.
ಸದ್ಯದಲ್ಲಿಯೇ ಸಂಪುಟ ವಿಸ್ತರಣೆ
ಸದ್ಯದಲ್ಲಿಯೇ ರಾಜ್ಯಸಭೆಯ ಕೆಲವು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆ ಬಳಿಕ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆಗೊಳಿಸಲಿರುವುದಾಗಿ ತಿಳಿದುಬಂದಿದೆ. ಸುಮಾರು ೨೦ ಮಂದಿ ಸಚಿವರುಗಳನ್ನು ಸೇರ್ಪಡೆಗೊಳಿಸಲು ಅವಕಾಶವಿದೆ.