ಕುಶಾಲನಗರ, ಜೂ. ೩: ತಾಲೂಕು ಕಚೇರಿಗೆ ಸಮಸ್ಯೆಗಳನ್ನು ಹೊತ್ತು ಬರುತ್ತಿದ್ದ ಜನಸಾಮಾನ್ಯರಿಗೆ ಉತ್ತಮ ಸೇವೆ ಸಲ್ಲಿಸುವ ಅವಕಾಶ ದೊರಕಿರುವುದು ತನಗೆ ಸಂಪೂರ್ಣ ತೃಪ್ತಿತಂದಿದೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಪ್ರಜ್ಞಾವಂತ ನಾಗರಿಕ ವೇದಿಕೆ ಆಶ್ರಯದಲ್ಲಿ ಕಿರಣ್ ಜಿ. ಗೌರಯ್ಯ ಅವರಿಗೆ ಪಟ್ಟಣದ ಕಲಾಭವನದಲ್ಲಿ ನಡೆದ ಬೀಳ್ಕೊಡುಗೆ ಮತ್ತು ನಾಗರಿಕ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಸೇವಾ ಅವಧಿಯ ಅನುಭವಗಳನ್ನು ಹಂಚಿಕೊAಡು, ಕುಶಾಲನಗರದಲ್ಲಿ ಕಚೇರಿ ಸಿಬ್ಬಂದಿಗಳ ಸಹಕಾರದೊಂದಿಗೆ ತನ್ನ ಅವಧಿಯಲ್ಲಿ ನೇರವಾಗಿ ಉತ್ತಮ ಸೇವೆ ನೀಡುವ ಪ್ರಯತ್ನ ಮಾಡಿರುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಕುಶಾಲನಗರ ನೂತನ ತಾಲೂಕು ರಚನೆಗೊಂಡ ಬೆನ್ನಲ್ಲೇ ಜನಸಾಮಾನ್ಯರಿಗೆ ಹಲವು ಸಮಸ್ಯೆಗಳು ಕಂಡುಬAದರೂ ಅದಕ್ಕೆ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಯಶಸ್ವಿಯಾಗಿದ್ದಾರೆ. ಅಧಿಕಾರಿಗಳು ಸ್ವಾರ್ಥ ರಹಿತವಾಗಿ ಕೆಲಸ ನಿರ್ವಹಿಸಿದಲ್ಲಿ ಸಮಾಜ ಅವರನ್ನು ಗುರುತಿಸುತ್ತದೆ ಮತ್ತು ಗೌರವಿಸುತ್ತದೆ ಎಂದು ಹೇಳಿದರು. ಕಿರಣ್ ಜಿ. ಗೌರಯ್ಯ ಅವರ ಅಧಿಕಾರ ಅವಧಿಯಲ್ಲಿ ಜನಸಾಮಾನ್ಯರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊAಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಕುಶಾಲನಗರ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಸ್.ಆರ್. ಮಾದಪ್ಪ ಉದ್ಘಾಟಿಸಿ ಮಾತನಾಡಿ, ನಿವೃತ್ತರಾದ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರಿಗೆ ಶುಭ ಕೋರಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕುಶಾಲನಗರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್, ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್, ರೆಡ್‌ಕ್ರಾಸ್ ತಾಲೂಕು ಅಧ್ಯಕ್ಷ ಎಸ್.ಕೆ. ಸತೀಶ್, ಕುಶಾಲನಗರ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ.ವಿ. ನಾರಾಯಣ, ನಿವೃತ್ತ ಪ್ರಾಂಶುಪಾಲ ಡಾ. ಜೆ. ಸೋಮಣ್ಣ, ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಪುರಸಭೆ ಮಾಜಿ ಸದಸ್ಯ ವಿ.ಎಸ್. ಆನಂದಕುಮಾರ್ ಅವರುಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ನಿವೃತ್ತ ತಹಶೀಲ್ದಾರ್ ಅವರಿಗೆ ಶುಭ ಹಾರೈಸಿದರು.

ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ನಾಗರಿಕ ಸನ್ಮಾನ ಹಾಗೂ ವಿವಿಧ ಸಂಘ-ಸAಸ್ಥೆಗಳ ವತಿಯಿಂದ ಪ್ರತ್ಯೇಕವಾಗಿ ಕಿರಣ್ ಜಿ. ಗೌರಯ್ಯ ಅವರನ್ನು ಸನ್ಮಾನ ಮಾಡಿ ಗೌರವಿಸಲಾಯಿತು. ಸಭೆಯಲ್ಲಿ ಪಟ್ಟಣ ಮತ್ತು ಸುತ್ತಮುತ್ತಲ ಗ್ರಾಮಗಳ ಸಂಘ-ಸAಸ್ಥೆಗಳ ಪ್ರಮುಖರು, ಮಾಜಿ ಜನಪ್ರತಿನಿಧಿಗಳು, ನಾಗರಿಕರು ಪಾಲ್ಗೊಂಡಿದ್ದರು. ಪತ್ರಕರ್ತ ಕೆ.ಎಸ್. ಮೂರ್ತಿ ಸ್ವಾಗತಿಸಿ, ವಿ.ಎಸ್. ಆನಂದಕುಮಾರ್ ವಂದಿಸಿದರು.