ಐಗೂರು, ಜೂ. ೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಜಿಲ್ಲಾಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿಗೆ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರಿನ ಎಂ.ಕೆ. ಮೋಹನ್ ಹಾಗೂ ಸುನಿತಾ ಪಿ.ಎಂ. ದಂಪತಿ ಪುತ್ರ ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಮನ್ವಿತ್ ಮೋಹನ್ ಭಾಜನರಾಗಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ತೋರಿದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀಕ್ಷಕಿ ವಿಮಲಾ ಕೆ.ಜೆ .ಅವರು ಮನ್ವಿತ್ ಮೋಹನ್‌ಗೆ ರೂ. ೧೦ ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಮನ್ವಿತ್ ಮೋಹನ್ ಬಾಕ್ಸಿಂಗ್‌ನಲ್ಲಿ ರಾಜ್ಯ, ರಾಷ್ಟç ಹಾಗೂ ಅಂತರರÁಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ್ದು, ಒಟ್ಟು ಆರು ಚಿನ್ನದ ಪದಕ ಪಡೆದಿದ್ದಾರೆ.