ಶನಿವಾರಸAತೆ, ಜೂ. ೪: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಿ-ಕುರಿ ಮಾಂಸದ ೩ ಮಳಿಗೆಗಳು ಸರಿಯಾಗಿ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಸೋಮವಾರಪೇಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ದಂಡ ವಿಧಿಸಿದ್ದಾರೆ. ಪರಮೇಶ್ ಕುಮಾರ್ ಹಾಗೂ ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಕೆ.ಆಯಿಷಾ ಅವರುಗಳು ಕೋಳಿ-ಕುರಿ ಮಾಂಸದ ೩ ಮಳಿಗೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.ತ್ಯಾಜ್ಯ ನಿರ್ವಹಣೆ ಕಾರ್ಯ ಸಮರ್ಪಕವಾಗಿ ನಿರ್ವಹಿಸದ ಕಾರಣ ಮೂರು ಮಳಿಗೆಗಳಿಗೆ ರೂ.೫, ೦೦೦ ದಂಡ ವಿಧಿಸಿದರು. ವ್ಯಾಪಾರಿಗಳಿಗೆ ತ್ಯಾಜ್ಯವನ್ನು ಸರಿಯಾದ ಕ್ರಮದಲ್ಲಿ ನಿರ್ವಹಣೆ ಮಾಡಬೇಕು ಎಂದು ಸೂಕ್ತ ನಿರ್ದೇಶನ ನೀಡಿದರು. ಶುಚಿತ್ವ ಕಾಪಾಡಬೇಕು. ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುನ್ನೆಚ್ಚರಿಕೆ ನೀಡಿದರು.