ಬೆಂಗಳೂರು, ಜೂ. ೪: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ಸಾರ್ವಜನಿಕ ಕುಂದುಕೊರತೆ ನಿರ್ವಹಣೆಗೆ ಹೊಸದೊಂದು ಸಚಿವಾಲಯ ಆರಂಭಿಸುವುದಾಗಿ ಘೋಷಿಸಿದ್ದಾರೆ. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಡಿಕೆಶಿ ಬಳಿಕ ಈ ಪ್ರಮುಖ ಘೋಷಣೆ ಹೊರಡಿಸಿದ್ದಾರೆ.

ಆ ಮೂಲಕ ಸಮಸ್ಯೆ ಆಲಿಸಲು ಪ್ರತ್ಯೇಕ ಸಚಿವರನ್ನು ನೇಮಿಸುವುದಾಗಿಯೂ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ (ಜೂನ್ ೪) ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಪ್ರಮುಖ ಘೋಷಣೆ ಹೊರಡಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡುವುದಾಗಿಯೂ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಡಿಕೆಶಿ ತಿಳಿಸಿದ್ದಾರೆ. ಶಿಕ್ಷಣಕ್ಕಾಗಿ ಬೆಂಗಳೂರಿಗೆ ವಲಸೆ ಬರುವುದನ್ನು ತಪ್ಪಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯದೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಅಧಿಕಾರಿಗಳು ತಾಲೂಕು, ಜಿಲ್ಲಾ ಕೇಂದ್ರಗಳಿಗೆ ತೆರಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ. ಬುಧವಾರ ಘೋಷಿಸಿದ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಅSಖ) ನಿಧಿ ದುರ್ಬಳಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ತಕ್ಷಣವೇ ಬ್ರೇಕ್ ಹಾಕಿ, ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು’ ಎಂದು ಹೇಳಿದ್ದಾರೆ. ಪ್ರತಿಯೊಬ್ಬ ಅಧಿಕಾರಿಯೂ ಆತ್ಮಸಾಕ್ಷಿ ಒಪ್ಪುವ ಹಾಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ ಜನ ಮೆಚ್ಚುವಂತೆ ಕೆಲಸ ಮಾಡಿ ಎಂದು ಕರೆ ನೀಡಿದ್ದಾರೆ.

ಡ್ರಗ್ಸ್ ದಂಧೆ ವಿರುದ್ಧ ಗುಡುಗು

ಇದೇ ವೇಳೆ ನೂತನ ಸಿಎಂ ರಾಜ್ಯದಲ್ಲಿ ಬೇರು ಬಿಟ್ಟಿರುವ ಡ್ರಗ್ಸ್ ದಂಧೆಯನ್ನು ಬುಡ ಸಮೇತ ಕಿತ್ತು ಹಾಕುವಂತೆ ಐಪಿಎಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರು ಸಹಿತ ಕಿತ್ತೊಗೆಯಬೇಕು. ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಡಿಕೆಶಿ ತಿಳಿಸಿದ್ದಾರೆ.

ಗೃಹಜ್ಯೋತಿ - ಲಕ್ಷಿö್ಮ ಪರಿಶೀಲನೆ

ರಾಜ್ಯದ ಗ್ಯಾರಂಟಿಗಳಾದ ಗೃಹಜ್ಯೋತಿ - ಗೃಹಲಕ್ಷಿö್ಮ ಸೌಲಭ್ಯಗಳನ್ನು ಕೆಲವರು ಅಕ್ರಮವಾಗಿ ಹೊಂದುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಿ ಕೇವಲ ನೈಜ ಫಲಾನು ಭವಿಗಳಿಗೆ ಲಭ್ಯವಾಗುವಂತೆ ಕ್ರಮಕೈಗೊಳ್ಳುವುದು ಎಂದು ಪ್ರಕಟಿಸಿದರು.

ಸಂಪುಟ ಸಚಿವರಿಗೆ ಸ್ಥಾನಮಾನ