ಕೂಡಿಗೆ, ಜೂ. ೪: ಕೂಡಿಗೆ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಕ್ರಮದ ಮಾಹಿತಿಯನ್ನು ನೀಡಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಈ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ‘ನಿರಂತರ’ ಎಂಬ ಆ್ಯಪ್‌ನೊಂದಿಗೆ ಮುಖಚರ್ಯ್ಯದ ಹಾಜರಾತಿ ಜಾರಿಗೊಳಿಸಿದ್ದು, ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗಿದೆ. ಪ್ರತಿ ತಿಂಗಳು ಕಿರು ಪರೀಕ್ಷೆ ಗಳನ್ನು ನಡೆಸುವುದರ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕಾಲೇಜಿನಲ್ಲಿ ವಿಶೇಷ ತರಗತಿ ಗಳು ಪ್ರಾರಂಭವಾಗಿದ್ದು, ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳನ್ನು ಪೋಷಕರು ಕಳುಹಿಸಿಕೊಡಬೇಕೆಂದು ಮಾಹಿತಿ ನೀಡಿದರು.

ಕಳೆದ ಸಾಲಿನ ಪಿಯುಸಿಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿರುವುದನ್ನು ಎಲ್ಲಾ ಪೋಷಕರ ಗಮನಕ್ಕೆ ತರಲಾಯಿತು. ಈ ಸಾಲಿನಲ್ಲೂ ಅದಕ್ಕಿಂತ ಇನ್ನೂ ಹೆಚ್ಚಿನ ಫಲಿತಾಂಶ ಬರಲು ಎಲ್ಲರೂ ಒಟ್ಟಾಗಿ ಸೇರಿ ಪ್ರಾರಂಭದಿAದಲೇ ಪ್ರಯತ್ನಿಸುವಂತೆ ಕರೆ ನೀಡಿದರು. ಅನೇಕ ಪೋಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಾಧ್ಯಕ್ಷ ಸೋಮಶೇಖರ್ ಆಗಮಿಸಿದ್ದರು. ಈ ಸಂದರ್ಭ ಕಾಲೇಜು ಉಪನ್ಯಾಸಕರಾದ ಹನುಮರಾಜು, ಲೀನಟ್ ಫರ್ನಾಂಡಿಸ್, ಸೂಜಿ ತಂಗಚ್ಚನ್, ಎಂ.ಟಿ ರಮೇಶ್, ಅನುಷಾ, ಗೌತಮಿ, ಆನಂದ್ ಹಾಜರಿದ್ದರು. ಕನ್ನಡ ಉಪನ್ಯಾಸಕ ರವೀಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಪ್ರಗತಿ ಬಡಿಗೇರ್ ಪ್ರಾರ್ಥಿಸಿದರು.