ವೀರಾಜಪೇಟೆ: ಈ ಬಾರಿ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ವೀರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂWದÀ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಮಾತನಾಡಿ, ಸಾರ್ವಜನಿಕ ಸೇವೆಗೆ ಸದಾ ತನ್ನನ್ನು ತೊಡಗಿಸಿಕೊಂಡಿರುವ ಶಾಸಕ ಪೊನ್ನಣ್ಣ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದರೆ ಕೊಡಗು ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಚಂದ್ರಶೇಖರ್ ರಾಜ, ಕಾರ್ಯದರ್ಶಿ ಪುಗ್ಗೆರ ನಂದಾ, ಖಜಾಂಚಿ ತೋರೆರ ಪೂವಯ್ಯ, ಮಾಜಿ ಸೈನಿಕರ ಕಾಂಗ್ರೆಸ್ ಸೆಲ್‌ನ ಜಿಲ್ಲಾಧ್ಯಕ್ಷ ಬಾಳೆಕುಟ್ಟಿರ ದಿನಿ ಬೋಪಯ್ಯ, ನಿರ್ದೇಶಕರುಗಳಾದ ಚೇಂದ್ರಿಮಾಡ ನಂಜಪ್ಪ, ಪಟ್ರಪಂಡ ಕರುಂಬಯ್ಯ, ಎಂ.ಕೆ. ಸಲಾಂ ಕಡಂಗ, ಕಬ್ಬಚಿರ ಬೋಪಣ್ಣ, ಹೆಚ್.ಕೆ. ಅಪ್ಪಯ್ಯ ಉಪಸ್ಥಿತರಿದ್ದರು.

ಬಿಲ್ಲವ ಸಮಾಜ ಸೇವಾ ಸಂಘ

ಮಡಿಕೇರಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು, ಅವರ ಸಂಪುಟದಲ್ಲಿ ಕೊಡಗಿನ ಇಬ್ಬರು ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಇವರುಗಳಿಗೆ ಸಚಿವ ಸ್ಥಾನ ನೀಡುವಂತೆ ಮಡಿಕೇರಿಯ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಿ.ಎಸ್.ಲೀಲಾವತಿ ಒತ್ತಾಯಿಸಿದ್ದಾರೆ

ಹಲವಾರು ಜನಪರ ಕಾರ್ಯಗಳ ಮೂಲಕ ಜನಾನುರಾಗಿಗಳಾಗಿರುವ ಎ.ಎಸ್.ಪೊನ್ನಣ್ಣ ಹಾಗೂ ಮಂತರ್ ಗೌಡ ಇವರುಗಳಿಗೆ ಸಚಿವ ಸ್ಥಾನ ನೀಡುವುದರಿಂದ ಕೊಡಗಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಅನುಕೂಲವಾಗಲಿದೆ ಎಂದು ಲೀಲಾವತಿ ಸೇರಿದಂತೆ ಸರ್ವ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಕೊಡವ ಕಲ್ಚರಲ್ ಅಸೋಸಿಯೇಷನ್

ಮಡಿಕೇರಿ : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಮಂತ್ರಿಮAಡಲದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ನ ಅಧ್ಯಕ್ಷ ಮತ್ತು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಂಚೆಟ್ಟಿರ ಮನು ಮುದ್ದಪ್ಪ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನಸ್ನೇಹಿ ಗುಣದ, ಅಭಿವೃದ್ಧಿಪರ ಚಿಂತನೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಹೊಂದಲು ಸಮರ್ಥರಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶನಿವಾರಸಂತೆ

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಬುಧವಾರ ರಾತ್ರಿ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.

ಸಂಘದ ಅಧ್ಯಕ್ಷ ಟಿ.ಆರ್.ಕೇಶವಮರ‍್ತಿ, ಪದಾಧಿಕಾರಿಗಳಾದ ಸಿ.ಜೆ. ಗಿರೀಶ್, ಎ.ಎಚ್.ಚಂದ್ರಕಾಂತ್, ಎಸ್.ಡಿ.ಬಸವರಾಜ್, ಗಿರೀಶ್, ಅಶೋಕ್, ಹರಪಳ್ಳಿ ಆನಂದ್, ಸುರೇಶ್, ಸ್ವಾಗತ್, ಸಮಾಜದ ಮುಖಂಡರು, ಕಾಂಗ್ರೆಸ್ ಕರ‍್ಯರ‍್ತರು ಹಾಜರಿದ್ದು ನೂತನ ಮುಖ್ಯಮಂತ್ರಿಗೆ ಜೈಕಾರ ಹಾಕಿದರು. ಶನಿವಾರಸಂತೆ

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಬುಧವಾರ ರಾತ್ರಿ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.

ಸಂಘದ ಅಧ್ಯಕ್ಷ ಟಿ.ಆರ್.ಕೇಶವಮರ‍್ತಿ, ಪದಾಧಿಕಾರಿಗಳಾದ ಸಿ.ಜೆ. ಗಿರೀಶ್, ಎ.ಎಚ್.ಚಂದ್ರಕಾಂತ್, ಎಸ್.ಡಿ.ಬಸವರಾಜ್, ಗಿರೀಶ್, ಅಶೋಕ್, ಹರಪಳ್ಳಿ ಆನಂದ್, ಸುರೇಶ್, ಸ್ವಾಗತ್, ಸಮಾಜದ ಮುಖಂಡರು, ಕಾಂಗ್ರೆಸ್ ಕರ‍್ಯರ‍್ತರು ಹಾಜರಿದ್ದು ನೂತನ ಮುಖ್ಯಮಂತ್ರಿಗೆ ಜೈಕಾರ ಹಾಕಿದರು.