ವೀರಾಜಪೇಟೆ, ಜೂ. ೪: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಯಾಗಿ ಮುಕ್ಕಾಟಿರ ವಿನಿತ ಕಾವೇರಮ್ಮ ಅವರನ್ನು ನೇಮಿಸ ಲಾಗಿದೆ.

ಕಾಂಗ್ರೆಸ್ ಪಕ್ಷದ ಶಾಸಕರು ಗಳು, ಜಿಲ್ಲಾ ಅಧ್ಯಕ್ಷರು, ಹಿರಿಯ ಕಾಂಗ್ರೆಸ್ ನಾಯಕರುಗಳ ಸಲಹೆಯ ಮೇರೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ವಿನಿತಾ ಕಾವೇರಮ್ಮ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಇವರು ಕಡಂಗಮರೂರು ಗ್ರಾಮದ ಮುಕ್ಕಾಟಿರ ಕರುಂಬಯ್ಯ ಅವರ ಪತ್ನಿ. ಇವರು ಹಲವಾರು ವರ್ಷಗಳಿಂದ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಕಾಕೋಟುಪರಂಬು ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದರಲ್ಲದೆ, ಪ್ರಸ್ತುತ ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆಯಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.