ಸೋಮವಾರಪೇಟೆ

ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಪಟ್ಟಣದ ವಿವೇಕಾನಂದ ಸರ್ಕಲ್ ಬಳಿಯಿರುವ ಬ್ಲಾಕ್ ಕಾಂಗ್ರೆಸ್ ಕಚೇರಿ ಮುಂಭಾಗ ಅಳವಡಿಸಿದ್ದ ಎಲೆಕ್ಟಾçನಿಕ್ ಸ್ಕಿçÃನ್ ಮೂಲಕ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮವನ್ನು ವೀಕ್ಷಿಸಿದ ಕಾಂಗ್ರೆಸ್ ಕಾರ್ಯಕರ್ತರು, ವಿವೇಕಾನಂದ ವೃತ್ತದಲ್ಲಿ ಪಟಾಕಿ ಸಿಡಿದರು. ನಂತರ ಇತರ ಸಚಿವರುಗಳ ಪ್ರಮಾಣ ವಚನ ಸ್ವೀಕಾರ ಕಾರ್ಯವನ್ನು ವೀಕ್ಷಿಸಿ ಮೆರವಣಿಗೆ ಮೂಲಕ ಪಟ್ಟಣದ ಖಾಸಗಿ ಬಸ್ ನಿಲ್ದಾಣಕ್ಕೆ ಆಗಮಿಸಿದರು. ಪುಟ್ಟಪ್ಪ ವೃತ್ತದಲ್ಲೂ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಪರವಾಗಿ ಘೋಷಣೆಗಳನ್ನು ಕೂಗಿದರು. ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತಸ ತಂದಿದೆ. ಕೊಡಗಿನ ಜ್ವಲಂತ ಸಮಸ್ಯೆಗಳು ಬಗೆಹರಿಯಬೇಕಾದರೆ ಸಚಿವ ಸ್ಥಾನ ಬೇಕಿದೆ. ಯುವ ಶಾಸಕರಾಗಿರುವ ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ಲಭಿಸಿದರೆ ಪಕ್ಷ ಸಂಘಟನೆಯೊAದಿಗೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಸAಭ್ರಮಾಚರಣೆಯಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಜಿಲ್ಲಾ ಸಮಿತಿಯ ವಿ.ಎ. ಲಾರೆನ್ಸ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಜೆ. ಸುನಿಲ್, ಉಪಾಧ್ಯಕ್ಷ ಬಸವರಾಜು, ಖಜಾಂಚಿ ಸಿ.ಈ. ಚೇತನ್, ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ, ಪ್ರಮುಖರಾದ ಎಸ್.ಎಂ. ಡಿಸಿಲ್ವಾ, ಕೆ.ಎ. ಆದಂ, ಡಿ.ಯು. ಕಿರಣ್, ಹೆಚ್.ಬಿ. ರಾಜಪ್ಪ, ಶೀಲಾ ಡಿಸೋಜ, ಜಾನಕಿ ಪರಮೇಶ್, ಹೆಚ್.ಸಿ. ನಾಗೇಶ್, ಎಂ.ಎ. ರುಬೀನಾ, ಜಮೀರ್ ಅಹ್ಮದ್, ಅಬ್ದುಲ್ ರಜಾಕ್, ಜೆ.ಎಲ್. ಜನಾರ್ದನ್, ವಿನೋದ್‌ಕುಮಾರ್, ಶುಭಾ, ಸಬಿತಾ ಚನ್ನಕೇಶವ, ಜಗದೀಶ್ ಸೇರಿದಂತೆ ಇತರರು ಇದ್ದರು.

ಮಡಿಕೇರಿ

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಇಂದಿರಾಗಾAಧಿ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತು.

ಕಾಂಗ್ರೆಸ್ ನಗರಾಧ್ಯಕ್ಷ ಎ.ಎಸ್.ಪ್ರಕಾಶ್ ಆಚಾರ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ ಘೋಷಣೆಗಳನ್ನು ಕೂಗಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ, ಕಾಂಗ್ರೆಸ್ ಪ್ರಮುಖರಾದ ಕಲೀಲ್ ಬಾಷಾ, ಯಶ್ ದೋಲ್ಪಾಡಿ, ಫ್ಯಾನ್ಸಿ ಪಾರ್ವತಿ, ದಿನೇಶ್ ಶೆಟ್ಟಿ, ಚಂದ್ರಶೇಖರ್ ಆರ್.ಪಿ, ಮುದ್ದುರಾಜು, ರವುಫ್ ಅಹಮದ್, ಕೋಚನ ಚೇತನ್, ಪುಷ್ಪ ಪೂಣಚ್ಚ, ನಂದ, ಸುಬ್ರಮಣಿ ಎಚ್.ಕೆ, ಜಿ.ಆರ್.ರಾಜು, ವಿ.ಕೆ.ನಜಿರ್ ಹುಸೇನ್, ಸದಾ ಮುದ್ದಪ್ಪ, ಜಗದೀಶ್ ಜಿ.ಸಿ, ಪವಿತ್ರ, ವಿಮಲಾ, ಪ್ರೇಮಾ, ಲೀಲಾ ಶೇಷಮ್ಮ, ನಿಂಗಪ್ಪ, ಧನಲಕ್ಷಿö್ಮ, ಫರೀದಾ ಬಾನು, ತಾಜುನ್ನಿಸ, ರವಿ ಪಾಪು, ರಿಯಾಸುದ್ದೀನ್, ಸೈಮನ್, ದಯಾನಂದ್ ಎಂ.ಎನ್, ಪ್ರತಾಪ್, ಯತೀಶ್, ಸುಲೇಮಾನ್, ಸಂಪತ್ ರಾಜ್ ಹಾಗೂ ಕಾರ್ಯಕರ್ತರು ಹಾಜರಿದ್ದರು. ಸಂಭ್ರಮಾಚರಣೆಯ ನಂತರ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಿಡಿದ ಪಟಾಕಿಗಳ ತ್ಯಾಜ್ಯವನ್ನು ತೆಗೆದು ರಸ್ತೆಯನ್ನು ಸ್ವಚ್ಛಗೊಳಿಸಿದರು.

ಗೋಣಿಕೊಪ್ಪ

ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಗೋಣಿಕೊಪ್ಪ ನಗರದಲ್ಲಿ ಒಕ್ಕಲಿಗ ಜನಾಂಗದವರು ಹಾಗೂ ಒಕ್ಕಲಿಗ ಯುವ ವೇದಿಕೆಯ ಪದಾಧಿಕಾರಿಗಳು ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ನಗರದ ಉಮಾಮಹೇಶ್ವರಿ ದೇವಾಲಯದಿಂದ ಮೆರವಣಿಗೆಯಲ್ಲಿ ಸಾಗಿ ಬಂದ ಒಕ್ಕಲಿಗ ಜನಾಂಗದವರು ಬಸ್ ನಿಲ್ದಾಣದಲ್ಲಿ ಸಮಾಗಮಗೊಂಡು ಪಟಾಕಿ ಸಿಡಿಸಿ, ಸಿಹಿ ಹಂಚಿದರು.

ಇವರ ಎರಡು ವರ್ಷಗಳ ಅವದಿಯಲ್ಲಿ ಕರ್ನಾಟಕ ರಾಜ್ಯ ಸಾಕಷ್ಟು ಅಭಿವೃದ್ಧಿ ಕಾಣಲಿ, ಕೊಡಗಿನ ಶಾಸಕರುಗಳಾದ ಎ.ಎಸ್. ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರುಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಿ ಎಂದು ಒಕ್ಕಲಿಗ ಸಮುದಾಯದವರು ಮನವಿ ಮಾಡಿದರು.

ಸಂಭ್ರಮಾಚರಣೆಯಲ್ಲಿ ಒಕ್ಕಲಿಗ ಯುವ ವೇದಿಕೆಯ ದಕ್ಷಿಣ ಕೊಡಗಿನ ಅಧ್ಯಕ್ಷರಾದ ಮಧುಸೂದನ್ ವಿ.ಜಿ., ಉಪಾಧ್ಯಕ್ಷ ಅಜಿತ್, ಕಾರ್ಯದರ್ಶಿ ಲವ ಮೈತಾಡಿ, ಗೌ. ಅಧ್ಯಕ್ಷರಾದ ಡಾಲು, ಮಾಜಿ ಅಧ್ಯಕ್ಷರಾದ ಮಹೇಶ್ ವಿ. ಎನ್. ಒಕ್ಕಲಿಗ ಜನಾಂಗದ ಹಿರಿಯರಾದ ವಿ.ಟಿ.ವಾಸು, ಗೋಪಾಲಕೃಷ್ಣ ಕೆ.ಎಸ್. ದೊಡ್ಡಮನೆ ಚಂದ್ರಶೇಖರ, ದೊಡ್ಡಮನೆ ಗೋಪಾಲಕೃಷ್ಣ, ವಿಠಲ ಡಿ.ಇ. ಕೀರ್ತಿ ಕಿರಣ್, ರಘುನಾಥ್, ಜಯಲಕ್ಷಿö್ಮ ಗಣೇಶ್, ಪ್ರಸನ್ನ, ಪ್ರಾಣೇಶ್, ಭೋಜಮ್ಮ ರಾಮಚಂದ್ರ, ಸುಜಾತ ಮಹೇಶ್, ರಶ್ಮಿ ಸತೀಶ್, ಸುಮಿತ್ರಾ ಭರತ್, ಅನಿಲ್ ಕುಮಾರ್, ಹಿರೇಶ್, ಶಶಿಧರ್ ಸೇರಿದಂತೆ ಅನೇಕ ಪ್ರಮುಖರು ಪಾಲ್ಗೊಂಡಿದ್ದರು..

ಸುಂಟಿಕೊಪ್ಪ

ಸುAಟಿಕೊಪ್ಪ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಾಚರಣೆಯನ್ನು ನಡೆಸಿದರು.

ಸುಂಟಿಕೊಪ್ಪ ನಗರಾಧ್ಯಕ್ಷ ರಫೀಕ್‌ಖಾನ್, ಸುಂಟಿಕೊಪ್ಪ ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಮಾಜಿ ಅಧ್ಯಕ್ಷೆ ಶಿವಮ್ಮ ಮಹೇಶ್, ಗ್ರಾ.ಪಂ.ಮಾಜಿ ಸದಸ್ಯ ಕೆ.ಎಂ.ಆಲಿಕುಟ್ಟಿ, ಹೋಬಳಿ ಅಧ್ಯಕ್ಷ ರಜಾಕ್, ಯುವ ಕಾಂಗ್ರೆಸ್ ಅಧ್ಯಕ್ಷ ಯಂಕನ ಶ್ರೀರಾಮ್, ನಗರ ಕಾಂಗ್ರೆಸ್ ಕಾರ್ಯದರ್ಶಿ ಯಂಕನ ಕೌಶಿಕ್, ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಜೀಜ್, ಕಾನ್‌ಬೈಲ್ ವಿಭಾಗದ ಅಧ್ಯಕ್ಷ ಆದಂ, ಮಹಿಳಾ ಘಟಕದ ಅಧ್ಯಕ್ಷೆ ರಮಣಿ, ಜಿ.ಪಂ.ಮಾಜಿ ಸದಸ್ಯೆ ಭಾನುಮತಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯರ್ತರು ಇದ್ದರು.

ಕುಶಾಲನಗರ

ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಕುಶಾಲನಗರ ಟೌನ್ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಸ್ಥಳೀಯ ಗಣಪತಿ ದೇವಾಲಯ ಮುಂಭಾಗ ಸೇರಿದ ಕಾರ್ಯಕರ್ತರು ಡಿಕೆಶಿ ಮತ್ತು ಪಕ್ಷದ ಪರವಾಗಿ ಘೋಷಣೆ ಕೂಗಿದರು. ಈ ಸಂದರ್ಭ ಮಾತನಾಡಿದ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ಮತ್ತು ಕೆಪಿಸಿಸಿ ಸದಸ್ಯರಾದ ಮಂಜುನಾಥ ಗುಂಡುರಾವ್ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನಡೆಯಲಿದೆ. ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯಲಿದೆ ಎಂದು ಆಶಾ ಭಾವನೆ ವ್ಯಕ್ತಪಡಿಸಿದರು.

ಐಗೂರು

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆ ಐಗೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆಗಳೊಂದಿಗೆ ಸಿಹಿ ಹಂಚಿ ಸಂಭ್ರಮಾಚರಿಸಿದರು. ಪಕ್ಷದ ಪ್ರಮುಖರಾದ ಸಬಿತಾ ಚೆನ್ನಕೇಶವ, ಕಡ್ಲೆರ ಹೊನ್ನಪ್ಪ, ದಿನೇಶ, ಕೆ.ಪಿ ಮುತ್ತಪ್ಪ, ರೋಷನ್, ಆಟಕೋಯ, ಕೃಷ್ಣಪ್ಪ, ಅಪ್ಪಚ್ಚು ಮತ್ತಿತರರಿದ್ದರು.