ಬೆಂಗಳೂರು, ಜೂ. ೪: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ೧೩ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ ಉಳಿಸಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿಗೆ ಕಂದಾಯ, ಯುವ ಸಬಲೀಕರಣ, ಕೃಷ್ಣ ಬೈರೇಗೌಡರಿಗೆ ಬೆಂಗಳೂರು ಅಭಿವೃದ್ದಿ, ಪ್ರಿಯಾಂಕ್ ಖರ್ಗೆಗೆ ಗೃಹ, ಐಟಿಬಿಟಿ, ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ನಗರಾಭಿವೃದ್ಧಿ, ಹಿಂದುಳಿದ ಕಲ್ಯಾಣ, ಯುಟಿ ಖಾದರ್‌ಗೆ ಆರೋಗ್ಯ, ಸತೀಶ್ ಜಾರಕಿಹೊಳಿಗೆ ಲೋಕೋಪಯೋಗಿ, ಎಂ.ಬಿ. ಪಾಟೀಲ್‌ಗೆ ಬೃಹತ್ ಕೈಗಾರಿಕೆ, ಕೆ.ಜೆ. ಜಾರ್ಜ್ಗೆ ಇಂಧನ, ಪ್ರವಾಸೋದ್ಯಮ, ಕೆ.ಎಚ್. ಮುನಿಯಪ್ಪರಿಗೆ ಆಹಾರ, ರಾಮಲಿಂಗಾ ರೆಡ್ಡಿಗೆ ಜಲಸಂಪನ್ಮೂಲ, ಈಶ್ವರ್ ಖಂಡ್ರೆಗೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಬೈರತಿ ಸುರೇಶ್‌ಗೆ ಸಾರಿಗೆ, ಡಾ. ಶರಣ ಪ್ರಕಾಶ್ ಪಾಟೀಲ್‌ರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಜವಾಬ್ದಾರಿಯನ್ನು ವಹಿಸಲಾಗಿದೆ.