ಮಡಿಕೇರಿ, ಜೂ. ೫: ಭಾರತೀಯ ಸಾಂಸ್ಕೃತಿಕ ಸಂಬAಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬAಧಿಸಿದAತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.
ಭಾರತೀಯ ಸಾಂಸ್ಕೃತಿಕ ಸಂಬAಧಗಳ ಪರಿಷತ್(ಐಸಿಸಿಆರ್) ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತರರಾಷ್ಟಿçÃಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡುವ ಮೂಲಕ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪೆನಲ್ (ಇmಠಿಚಿಟಿeಟ) ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಹೆಚ್ಚು ಪ್ರಚಾರ ಪಡಿಸಲು ಅವಕಾಶವಾಗುತ್ತದೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು(ಬೆಂಗಳೂರು) ತಿಳಿಸಿದ್ದಾರೆ.
ಆದ್ದರಿಂದ ಕೊಡಗು ಜಿಲ್ಲೆಯ ಕಲಾವಿದರು ಹಾಗೂ ಕಲಾತಂಡಗಳು ನಿಗಧಿತ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ತಾ.೧೨ ರೊಳಗೆ ಸಲ್ಲಿಸಿ ನೋಂದಣಿಯಾಗಲು ಈ ಮೂಲಕ ಕೋರಿದೆ.
ನಮೂನೆಯನ್ನು ಇಲಾಖೆಯ ವೆಬ್ಸೈಟ್ ತಿತಿತಿ.ಞಚಿಟಿಟಿಚಿಜಚಿsiಡಿi.ಞಚಿಡಿಟಿಣಚಿಞಚಿ.gov.iಟಿ ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.