ಗೋಣಿಕೊಪ್ಪಲು. ಜೂ.೫: ಅರ್ವತೋಕ್ಲು ವಿದ್ಯಾನಿಕೇತನ ಪದವಿಪೂರ್ವ ಕಾಲೇಜು ವತಿಯಿಂದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿ.ಯು ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಅದ್ದೂರಿಯಾಗಿ ನೆರವೇರಿತು.
ಸಂಸ್ಥೆಯ ಅಧ್ಯಕ್ಷರಾದ ಕೆ.ಎಂ ಸುನಿಲ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು. ಕನ್ನಡ ಉಪನ್ಯಾಸಕರಾದ ಸಂತೋಷ್ ಕುಮಾರ್ ಹೊಸ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಹರೀಶ್ ತಾಮಾನಕರ್ ಅವರು ಸಭೆಯನ್ನು ಉದ್ದೇಶಿಸಿ, ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಮೃದ್ಧಿ ಪ್ರಾರ್ಥಿಸಿ, ಕಾಲೇಜಿನ ಉಪನ್ಯಾಸಕ ಸಂತೋಷ್ ಸ್ವಾಗತಿಸಿ, ಜೀವಶಾಸ್ತç ವಿಭಾಗದ ಉಪನ್ಯಾಸಕ ರಘುನಾಥ್, ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಅಧ್ಯಾಪಕ, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.