ನಾಪೋಕ್ಲು, ಜೂ. ೫: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೌಕರ ಎ.ಎ. ರಘುಪತಿ ನಿವೃತ್ತಿ ಹೊಂದಿದ್ದು ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂರ್ನಾಡು ಬಾಲಕರ ವಸತಿ ನಿಲಯದಲ್ಲಿ ನೌಕರರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ರಘುಪತಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಡಿಕೇರಿಯ ತಾಲೂಕು ಕಚೇರಿಯಲ್ಲಿ ಇಲಾಖೆಯ ತಾಲೂಕು ಅಧಿಕಾರಿ ಶ್ರೀಕಾಂತ್ ಇಲಾಖೆಯ ವತಿಯಿಂದ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಸೋಮವಾರಪೇಟೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.