ಕೂಡಿಗೆ, ಜೂ. ೫: ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿಯ ೪ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ, ಬಹುಮಾನ ವಿತರಣೆ ಕಾರ್ಯಕ್ರಮ ಅಕಾಡೆಮಿಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಗಮಿಸಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಮೊಬೈಲ್ ಗೇಮ್ಸ್ ಹಾಗೂ ಅನವಶ್ಯಕ ಕಾರಣಗಳಿಂದ ಮಕ್ಕಳು ಸೋಮಾರಿಗಳಾಗುತ್ತಿರುವ ಈ ಸಂದರ್ಭದಲ್ಲಿ ಇಂತಹ ಬೇಸಿಗೆ ಶಿಬಿರಗಳು ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿವೆ ಎಂದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಷಂಶುದ್ದೀನ್, ಕುಶಾಲನಗರದ ಪತ್ರಕರ್ತ ಕೆ.ಟಿ. ಪ್ರಭುದೇವ್ ಬೇಸಿಗೆ ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿಯ ಸಂಸ್ಥಾಪಕ, ನೃತ್ಯ ಸಂಯೋಜಕ ಅಕ್ತರ್ ಮತ್ತು ಪೋಷಕ ವೃಂದದವರು ಮುಖ್ಯ ಅತಿಥಿಗಳನ್ನು ಸನ್ಮಾನಿಸಿದರು.

"ಬೆಸ್ಟ್ ಸ್ಟೂಡೆಂಟ್ ಅವಾರ್ಡ್" ಪ್ರಶಸ್ತಿಯನ್ನು ಎ ಕ್ರಿಯೇಟಿವ್ ನೃತ್ಯ ಸಂಸ್ಥೆಯ ಲಾವಣ್ಯ ಮತ್ತು ಸೃಷ್ಟಿ ಪಡೆದುಕೊಂಡರು. ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು.