ಮಡಿಕೇರಿ, ಜೂ.೦೫: ಕರ್ನಾಟಕ ಲೋಕಾಯುಕ್ತ-ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಂiÀತಾ.೧೦ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಸೋಮವಾರಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂ.ಸಂ.೦೮೨೭೨-೨೯೫೨೯೭ ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.