ಸಿದ್ದಾಪುರ, ಜೂ. ೫: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿರುವ ಡಿ.ಕೆ. ಶಿವಕುಮಾರ್ ಬುಧವಾರದಂದು ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಕೊಡಗು ಜಿಲ್ಲಾಧ್ಯಕ್ಷ ಎಂ.ಎ. ನವೀದ್ ಖಾನ್ ನೇತೃತ್ವದಲ್ಲಿ ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.

ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ., ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್, ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳಾದ ಸಿದ್ದೀಕ್, ರಿಜ್ವಾನ್, ಚಂದನ್ ಕುಮಾರ್, ಅಬ್ದುಲ್ ರಜಾಕ್, ಚೇಕು, ಅನಿಲ್ ಸೀನಪ್ಪ, ಆದಂ, ಸೈಯದ್ ಅಲವಿ, ಶರೀಫ್, ಇನ್ನಿತರರು ಹಾಜರಿದ್ದರು.