ಕೂಡಿಗೆ, ಜೂ. ೫: ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಸಂಬAಧ ಕಾವೇರಿ ನೀರಾವರಿ ನಿಗಮದ ಸೂಚನೆಯಂತೆ ಹಾರಂಗಿ ನೀರಾವರಿ ಇಲಾಖೆಯ ಇಂಜಿನಿಯರ್ ತಂಡದವರು ಚಿಕ್ಲಿಹೊಳೆ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಣೆಕಟ್ಟೆಯ ಮುಖ್ಯ ದ್ವಾರ, ನಾಲೆಯ ಬಾಗಿಲುಗಳ ವೀಕ್ಷಣ, ಅಣೆಕಟ್ಟೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಯ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಹಾರಂಗಿ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತರ ಸತೀಶ್, ಅಭಿಯಂತರ ಐ.ಕೆ ಪುಟ್ಟಸ್ವಾಮಿ, ಸಹಾಯಕ ಇಂಜಿನಿಯರ್ ಕಿರಣ್ ದೇವಯ್ಯ, ಸೌಮ್ಯ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.