ಮಡಿಕೇರಿ, ಜೂ. ೫ : ಇಲ್ಲಿನ ಹೊರವಲಯದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಖೈದಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ಚುರುಕುಗೊಂಡಿದ್ದು, ಇಂದು ಕಾರಾಗೃಹಕ್ಕೆ ಬಂದಿಖಾನೆ ಇಲಾಖೆಯ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ದಕ್ಷಿಣ ವಲಯ ಬಂದಿಖಾನೆ ಇಲಾಖೆ ಐಜಿಪಿ ದಿವ್ಯಶ್ರೀ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಕಾರಾಗೃಹದಲ್ಲಿ ಘಟನೆ ನಡೆದ ಸ್ಥಳ, ಸಿಸಿಟಿವಿಗಳನ್ನು ಪರಿಶೀಲಿಸಿ ಕಾರಾಗೃಹ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಪ್ರಕರಣ ದಾಖಲಾಗಿರುವ ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ಚಂದ್ರಶೇಖರ್ ಹಾಗೂ ಡಿವೈಎಸ್‌ಪಿ ಸೂರಜ್ ಅವರುಗಳಿಂದಲೂ ಮಾಹಿತಿ ಸಂಗ್ರಹಿಸಿದರು. ಕಾರಾಗೃಹದಲ್ಲಿರುವ ಪುಂಡಾಟ ನಡೆಸುವ, ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುವ ಖೈದಿಗಳನ್ನು ಪ್ರತ್ಯೇಕ ಸೆಲ್‌ಗಳಲ್ಲಿ ಇರಿಸುವಂತೆ, ಕಾರಾಗೃಹದಲ್ಲಿ ಖೈದಿಗಳಿಗೆ ಯೋಗ, ದ್ಯಾನ ಹಾಗೂ ಶಿಕ್ಷಣ ವಂಚಿತವಾಗಿರುವವರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.